ಕೆ.ಎನ್.ಪಿ.ವಾರ್ತೆ,ಮುಂಬೈ,ಅ.24;

ಎರಡು ರಾಜ್ಯಗಳ ವಿಧಾನಸಭಾ ಚುನಾವಣಾ ಫಲಿತಾಂಶ ಇಂದು ಪ್ರಕಟಗೊಳ್ಳಲಿದ್ದು, ನಿರೀಕ್ಷೆಯಂತೆಯೇ ಮಹಾರಾಷ್ಟ್ರದಲ್ಲಿ ಬಿಜೆಪಿ-ಶಿವಸೇನೆ ಮೈತ್ರಿಕೂಟ ಭಾರಿ ಮುನ್ನಡೆಯತ್ತ ದಾಪುಗಾಲಿರಿಸಿದೆ.

ಚುನಾವಣೋತ್ತರ ಸಮೀಕ್ಷೆಗಳು ಮಹಾರಾಷ್ಟ್ರದಲ್ಲಿ ಬಿಜೆಪಿಗೆ ಸ್ಪಷ್ಟ ಬಹುಮತ ಸಿಗುತ್ತದೆ ಎಂದು ಭವಿಷ್ಯ ನುಡಿದಿದ್ದವು. ಸದ್ಯದ ಫಲಿತಾಂಶದಲ್ಲಿ ಬಿಜೆಪಿ ಭಾರೀ ಮುನ್ನಡೆಯತ್ತ ಸಾಗುತ್ತಿರುವುದು ಸಮೀಕ್ಷೆಗಳ ಭವಿಷ್ಯ ನಿಜವಾಗುವ ಲಕ್ಷಣಗಳು ಗೋಚರಿಸುತ್ತಿವೆ.

ಜಮ್ಮು ಮತ್ತು ಕಾಶ್ಮೀರದ ವಿಶೇಷ ಸ್ಥಾನಮಾನ ನೀಡುವ ಸಂವಿಧಾನದ 370ನೇ ವಿಧಿ ರದ್ದತಿಯ ನಂತರ ನಡೆದ ಮೊದಲ ವಿಧಾನಸಭೆ ಚುನಾವಣೆ ಇದಾಗಿದ್ದು, ಬಿಜೆಪಿ ಪಾಲಿಗೆ ಇದು ಪ್ರತಿಷ್ಠೆಯ ಪ್ರಶ್ನೆಯಾಗಿದೆ. ಅಲ್ಲದೆ ಕಾಶ್ನೀರ ವಿಚಾರವಾಗಿ ತಾನು ಕೈಗೊಂಡ ನಿರ್ಣಯಕ್ಕೆ ಜನರ ಮನ್ನಣೆ ಇದೆ ಎಂದು ಹೇಳಿಕೊಳ್ಳಲು ಬಿಜೆಪಿಗೆ ಈ ಚುನಾವಣೆ ಅತ್ಯಂತ ಪ್ರಮುಖವಾಗಿದೆ.

ಮಹಾರಾಷ್ಟ್ರದಲ್ಲಿ ಬಿಜೆಪಿ ಮತ್ತು ಶಿವಸೇನೆ ಮೈತ್ರಿಕೂಟದ ಅಭ್ಯರ್ಥಿಗಳು ಒಟ್ಟು 180 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದಾರೆ. ಮುನ್ನಡೆಗಳು ಗೆಲುವಾದರೆ ಬಿಜೆಪಿ ಮೈತ್ರಿಕೂಟ ಅಧಿಕಾರದ ಚುಕ್ಕಾಣಿ ಹಿಡಿಯುವುದು ನಿಚ್ಚಳವಾಗಿದೆ. ಉಳಿದಂತೆ 87 ವಿಧಾನಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಮತ್ತು ಎನ್‌ಸಿಪಿ ಮೈತ್ರಿ ಅಭ್ಯರ್ಥಿಗಳು ಮುನ್ನಡೆ ಸಾಧಿಸಿದ್ದಾರೆ. 2014ರಲ್ಲಿ ಪಕ್ಷವು 83 ಕ್ಷೇತ್ರಗಳಲ್ಲಿ ಜಯಗಳಿಸಿತ್ತು.

ಮಹಾರಾಷ್ಟ್ರದಲ್ಲಿ ಒಟ್ಟು ಮತದಾರರ ಸಂಖ್ಯೆ 8.9 ಕೋಟಿ. ಈ ಪೈಕಿ 4.49 ಕೋಟಿ ಪುರುಷರು ಹಾಗೂ 4.28 ಕೋಟಿ ಮಹಿಳಾ ಮತದಾರರಿದ್ದಾರೆ. 235 ಮಹಿಳೆಯರು ಸೇರಿದಂತೆ 3237 ಉಮೇದುವಾರರು ಚುನಾವಣಾ ಕಣದಲ್ಲಿದ್ದರು.

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ… 

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.