ಕೆ.ಎನ್.ಪಿ.ವಾರ್ತೆ,ನವದೆಹಲಿ,ಆ.25;

ಶನಿವಾರ ನಿಧನರಾದ ಬಿಜೆಪಿ ಟ್ರಬಲ್ ಶೂಟರ್ ಎಂದೇ ಖ್ಯಾತಿ ಪಡೆದಿದ್ದ ಮಾಜಿ ಕೇಂದ್ರ ಹಣಕಾಸು ಸಚಿವ ಅರುಣ್ ಮಹಾರಾಜ್‌ ಕಿಶನ್‌ ಜೇಟ್ಲಿ (66) ಅವರು ಭಾನುವಾರ ಮಧ್ಯಾಹ್ನ ಪಂಚಭೂತಗಳಲ್ಲಿ ಲೀನವಾದರು.

ಇಂದು ಮಧ್ಯಾಹ್ನ ದೆಹಲಿಯ ನಿಗಂಬೋಧ್ ಘಾಟನ್ ನಲ್ಲಿ ಸಕಲ ಸರ್ಕಾರಿ ಗೌರವದೊಂದಿಗೆ ಅರುಣ್ ಜೇಟ್ಲಿ ಅವರ ಅಂತ್ಯಕ್ರಿಯೆಯನ್ನು ನೆರವೇರಿಸಲಾಯಿತು.

ಇದಕ್ಕು ಮುನ್ನ ಅರುಣ್ ಜೇಟ್ಲಿ ಅವರ ಪಾರ್ಥಿವ ಶರೀರವನ್ನು ಬಿಜೆಪಿ ಪ್ರಧಾನ ಕಚೇರಿಯಿಂದ ನಿಗಂಬೋಧ್ ವರೆಗೆ ಮೆರವಣಿಗೆ ಮೂಲಕ ತರಲಾಯಿತು.

ಬಿಜೆಪಿ ಅಧ್ಯಕ್ಷ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ಕಾರ್ಯಾಧ್ಯಕ್ಷ ಜೆಪಿ ನಡ್ಡಾ, ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು, ಯೋಗ ಗುರು ಬಾಬಾ ರಾಮ್ ದೇವ್, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸೇರಿದಂತೆ ಹಲವು ಕೇಂದ್ರ ಸಚಿವರು ಹಾಗೂ ರಾಜಕೀಯ ಪಕ್ಷಗಳ ಮುಖಂಡರು ಅಂತ್ಯಕ್ರಿಯೆಯಲ್ಲಿ ಭಾಗವಹಿಸಿ ಅರುಣ್ ಜೇಟ್ಲಿ ಅಂತಿಮ ನಮನ ಸಲ್ಲಿಸಿದರು.

http://karnatakanewsportal.com/maji-kendravitha-sachiva-arunjetli-nidhana/

http://karnatakanewsportal.com/kendra-maji-sachiva-arunjetli-jeevana-yatre/

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ… 

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.