ಕೆ.ಎನ್.ಪಿ.ವಾರ್ತೆ,ಬೆಂಗಳೂರು,ಆ.24;

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಜನಪ್ರತಿನಿಧಿಗಳ ಕೋರ್ಟ್ ನಿನ್ನೆ ಸಮನ್ಸ್ ಜಾರಿ ಮಾಡಿದೆ. ಮೈಸೂರಿನ ಹೀಕಲ್ ಗ್ರಾಮ ಪಂಚಾಯ್ತಿಯ 10 ಗುಂಟೆ ಜಮೀನು ಡಿನೋಟಿಫಿಕೇಷನ್ ಪ್ರಕರಣದಲ್ಲಿ ಸಿದ್ದರಾಮಯ್ಯ ಅವರಿಗೆ ಸಮನ್ಸ್ ಜಾರಿ ಮಾಡಲಾಗಿದೆ.

ಆ ಜಾಗದಲ್ಲಿ ಸಿದ್ದರಾಮಯ್ಯ ಅವರು ಮನೆಯನ್ನು ನಿರ್ಮಿಸಿ ಬಳಿಕ ಅದನ್ನು ಮಾರಾಟ ಮಾಡಿದ್ದರು ಎನ್ನುವ ಆರೋಪ ಕೂಡ ಕೇಳಿಬಂದಿತ್ತು. ಸಿದ್ದರಾಮಯ್ಯ ಅವರು ಉಪಮುಖ್ಯಮಂತ್ರಿಯಾಗಿದ್ದ ಸಂದರ್ಭ ಅಂದರೆ 1997ರಲ್ಲಿ ಡಿ ನೋಟಿಫಿಕೇಷನ್ ಮಾಡಿದ್ದಾರೆ ಎನ್ನಲಾಗಿದೆ.

ಈ ಪ್ರಕರಣವನ್ನು ಮೈಸೂರು ಪೊಲೀಸರು ಬಿ ರಿಪೋರ್ಟ್ ಸಲ್ಲಿಸಿದ್ದರು. ಇದನ್ನು ಪ್ರಶ್ನಿಸಿ ಸಾಮಾಜಿಕ ಕಾರ್ಯಕರ್ತ ಗಂಗರಾಜು ಕೋರ್ಟ್ ಮೆಟ್ಟಿಲೇರಿದ್ದರು. ಇದೀಗ ವಿಚಾರಣೆ ನಡೆಸಿರುವ ಜನಪ್ರತಿನಿಧಿಗಳ ನ್ಯಾಯಾಲಯ ಸೆಪ್ಟೆಂಬರ್ 23ರಂದು ಸಿದ್ದರಾಮಯ್ಯ ಅವರು ಕೋರ್ಟ್‌ಗೆ ಹಾಜರಾಗುವಂತೆ ಸಮನ್ಸ್ ಜಾರಿ ಮಾಡಿದೆ.

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ… 

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.