ಕೆ.ಎನ್.ಪಿ.ವಾರ್ತೆ,ಮಂಗಳೂರು,ಜು.30;

ಮಾಜಿ ಮುಖ್ಯಮಂತ್ರಿ ಎಸ್. ಎಂ. ಕೃಷ್ಣ ಅವರ ಅಳಿಯ, ಕಾಫಿ ಡೇ ಮಾಲೀಕ ಸಿದ್ಧಾರ್ಥ ಅವರು ದಿಢೀರ್‌ ನಾಪತ್ತೆಯಾಗಿದ್ದು, ಕುಟುಂಬ ಹಾಗೂ ಆಪ್ತ ವಲಯದಲ್ಲಿ ಆತಂಕ ಮನೆ ಮಾಡಿದೆ.

ಸೋಮವಾರ ಸಂಜೆ ಬೆಂಗಳೂರಿನಿಂದ ಇನೋವಾ ಕಾರಿನಲ್ಲಿ ಮಂಗಳೂರಿಗೆ ಆಗಮಿಸಿದ್ದರು. ರಾತ್ರಿ 7.30ರ ವೇಳೆ ಕಾರಿನಲ್ಲಿ ಚಾಲಕನ ಜತೆ ಉಳ್ಳಾಲದತ್ತ ತೆರಳಿ ಕಾರನ್ನು ಒಂದು ಸೇತುವೆಯ ಬದಿ ನಿಲ್ಲಿಸಲು ಹೇಳಿ, ಮೊಬೈಲ್‌ನಲ್ಲಿ ಮಾತನಾಡುತ್ತ ಏಕಾಂಗಿಯಾಗಿ ಸೇತುವೆಯಲ್ಲಿ ನಡೆದುಕೊಂಡು ಹೋಗಿದ್ದಾರೆ. 

 ಆ ಬಳಿಕ ಚಾಲಕ ಸುಮಾರು ಅರ್ಧ ಗಂಟೆ ಕಾದರೂ ಸಿದ್ಧಾರ್ಥ ಬರಲಿಲ್ಲ. ಇದಕ್ಕೆ ಆತಂಕಿತರಾದ ಚಾಲಕ ಪೊಲೀಸ್ ಹಾಗೂ ಕುಟುಂಬದವರಿಗೆ ಮಾಹಿತಿ ನೀಡಿದ್ದಾರೆ.

ಘಟನಾ ಸ್ಥಳಕ್ಕೆ ಪೊಲೀಸರು, ಅಗ್ನಿಶಾಮಕ ದಳ ಸಿಬ್ಬಂದಿ ಆಗಮಿಸಿದ್ದು, ಪರಿಶೀಲನೆ ನಡೆಸಲಾಗುತ್ತಿದೆ. ನದಿ ತುಂಬಿ ಹರಿಯುತ್ತಿದ್ದು, ಶೋಧ ಕಾರ್ಯ ನಡೆಯುತ್ತಿದೆ. ಮಾಜಿ ಸಚಿವ ಯು.ಟಿ.ಖಾದರ್ ಸೇರಿದಂತೆ ಜಿಲ್ಲಾಧಿಕಾರಿ, ಡಿಸಿಪಿಗಳು ಸ್ಥಳಕ್ಕೆ ಭೇಟಿ ನೀಡಿದ್ದಾರೆ.

ಎಸ್‌.ಎಂ.ಕೃಷ್ಣ ನಿವಾಸಕ್ಕೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ, ಮಾಜಿ ಸಚಿವ ಡಿ.ಕೆ.ಶಿವಕುಮಾರ್, ಬಿ ಎಸ್ ಶಂಕರ್ ಸೇರಿದಂತೆ ಗಣ್ಯರು ಭೇಟಿ ನೀಡಿದ್ದಾರೆ.

ನಿಗೂಢವಾದ ಪ್ರಕರಣ:

ಬೆಂಗಳೂರಿನಿಂದ ಇನ್ನೋವಾ ಕಾರಿನಲ್ಲಿ ತೆರಳುತ್ತಿದ್ದ ವಿ.ಜಿ. ಸಿದ್ದಾರ್ಥ ಅವರು ನೇತ್ರಾವತಿ ನದಿ ಸೇತುವೆ ಬಳಿ ನಡೆದುಕೊಂಡು ಹೋಗಿದ್ದು ಎಲ್ಲಿಗೆ ಎಂಬುದರ ಬಗ್ಗೆ ತನಿಖೆ ತೀವ್ರಗೊಂಡಿದೆ.

ಬೆಂಗಳೂರಿನಿಂದ ಫೋನ್ ಸಂಭಾಷಣೆಯಲ್ಲಿ ತೊಡಗಿದ್ದರು, ಮಾತನಾಡುತ್ತಲೇ ನದಿ ಕಡೆಗೆ ವಾಕಿಂಗ್ ತೆರಳಿದರು ಎಂಬ ಮಾಹಿತಿಯಿದೆ. ಅರ್ಧಗಂಟೆಯಾದರು ಸಿದ್ದಾರ್ಥ ಸುಳಿವು ಸಿಗದ ಕಾರಣ, ಅವರ ವಾಹನ ಚಾಲಕ ಕರೆ ಮಾಡಿದ್ದಾರೆ, ಆದರೆ, ಫೋನ್ ಸ್ವಿಚ್ಡ್ ಆಫ್ ಬಂದಿದೆ. ಮೊಬೈಲ್ ಟವರ್ ಟ್ರೇಸ್ ಮಾಡಿದಾಗ ಸೇತುವೆ ಬಳಿಯೇ ಕೊನೆಯ ಬಾರಿಗೆ ನೆಟ್ವರ್ಕ್ ಕಂಡು ಬಂದಿದೆ. ಸಿದ್ದಾರ್ಥ ಅವರು ನದಿಗೆ ಜಾರಿ ಬಿದ್ದರೆ, ಆತ್ಮಹತ್ಯೆ ಮಾಡಿಕೊಂಡರೇ? ನದಿ ಬಳಿ ದಾರಿ ತಪ್ಪಿದರೆ? ಯಾರಾದ್ರೂ ಅಪಹರಿಸಿದರೆ? ಎಂಬೆಲ್ಲ ಪ್ರಶ್ನೆಗಳು ಎದ್ದಿವೆ.

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ… 

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.