ಕೆ.ಎನ್.ಪಿ.ವಾರ್ತೆ,ನವದೆಹಲಿ,ಆ.16;

ಮಾಜಿ ಪ್ರಧಾನಿ ಹಾಗೂ ಬಿಜೆಪಿ ಸರ್ವೋಚ್ಛ ನಾಯಕ ಅಟಲ್ ಬಿಹಾರಿ ವಾಜಪೇಯಿ ಅವರ ಮೊದಲ ಸಂಸ್ಮರಣಾ ದಿನ ಆಚರಣೆ ಇಂದು ನಡೆಯಲಿದೆ.

ಪ್ರಧಾನಿ ಮೋದಿ ಹಾಗೂ ಸಚಿವ ಸಂಪುಟದ ಹಿರಿಯ ಸದಸ್ಯರು ಅಟಲ್ ಸದೈವ ಸ್ಮಾರಕಕ್ಕೆ ಭೇಟಿ ನೀಡಿ ಪುಷ್ಪನಮನ ಸಲ್ಲಿಸಲಿದ್ದಾರೆ. ಸ್ಮಾರಕ ಇರುವ ಜಾಗದಲ್ಲಿ ವಿಶೇಷ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, ಅಟಲ್ ಬದುಕಿನ ಮಾಹಿತಿಗಳು ಇರಲಿವೆ.

ಬಿಜೆಪಿಯ ಮೊದಲ ಸರ್ಕಾರ ರಚಿಸಿದ್ದ ವಾಜಪೇಯಿ ಅವರು 2018ರ ಆಗಸ್ಟ್ 16ರಂದು ಏಮ್ಸ್‌ ಆಸ್ಪತ್ರೆಯಲ್ಲಿ ನಿಧನರಾಗಿದ್ದರು. ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ವಾಜಪೇಯಿ ಅವರ ನಿಧನಕ್ಕೆ ಇಡೀ ದೇಶವೇ ಕಂಬನಿ ಮಿಡಿದಿತ್ತು.

ದೇಶ ಕಂಡ ಅತ್ಯುತ್ತಮ ಸಂಸದೀಯ ಪಟು, ಅಜಾತಶತೃ, ಕವಿಹೃದಯದ ರಾಜಕಾರಣಿ ಎಂಬ ಹೆಗ್ಗಳಿಕೆಗೆ ಅಟಲ್ ಪಾತ್ರರಾಗಿದ್ದರು. ದೇಶದಲ್ಲಿ ಬಿಜೆಪಿ ಪೂರ್ಣ ಬಹುಮತದೊಂದಿಗೆ ಸರ್ಕಾರ ರಚಿಸಬೇಕು. ಸಂವಿಧಾನದ 370ನೇ ವಿಧಿ ರದ್ದುಗೊಳಿಸಬೇಕು ಸೇರಿ ಇತರೆ ವಿಚಾರಗಳ ಬಗ್ಗೆ ವಾಜಪೇಯಿ ಅವರು ಸ್ಪಷ್ಟವಾದ ನಿಲುವು ಹೊಂದಿದ್ದರು. ಈಗ ವಾಜಪೇಯಿ ಅವರ ಮೊದಲ ಸಂಸ್ಮರಣಾರ್ಥ ದಿನದ ಅವಧಿಗೆ ಇದು ಸಾಕಾರಗೊಂಡಿದೆ.

http://karnatakanewsportal.com/maji-pradhani-atal-bihari-vajapeyi-nidhana-vijayaghat-nalli-anthyakriye/

http://karnatakanewsportal.com/maji-pradhani-atal-bihari-vajapeyi-nidhana-ganyara-kambani/

http://karnatakanewsportal.com/bharata-ratna-atal-bihari-vajapeyige-ganyara-ashrutarpanna/

http://karnatakanewsportal.com/bharataratna-atalbihari-vajapeyige-ashrutarpanadondige-vidaya/

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ… 

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.