ಕೆ.ಎನ್.ಪಿ.ವಾರ್ತೆ,ದಾವಣಗೆರೆ,ಏ.30

ಕೆಲ ದಿನಗಳಿಂದ ಬಿಸಿಲ ಧಗೆಗೆ ಕಂಗೆಟ್ಟಿದ್ದ ಜನರಿಗೆ ಮಂಗಳವಾರ ಸುರಿದ ಮಳೆಯಿಂದ ಸ್ವಲ್ಪಮಟ್ಟಿಗೆ ನಿಟ್ಟುಸಿರು ಬಿಡುವಂತಾಗಿದೆ. ಆದರೆ ಸತತ ಮೂರು ಗಂಟೆಗಳ ಕಾಲ ಗಾಳಿ, ಗುಡುಗು ಸಹಿತ ಸುರಿದ ಮಳೆ ಅವಾಂತರ ಸೃಷ್ಟಿಸಿದೆ.

ಉಚ್ಚಂಗಿದುರ್ಗ ಗ್ರಾಮದಲ್ಲಿ ಗಾಳಿ, ಮಳೆಗೆ ಗುಡ್ಡದ ಮೇಲಿನ ಮರಿಯಪ್ಪಳರ ಮಂಜುನಾಥ್ ಹಾಗೂ ಮೆಳ್ಳಕಟ್ಟೆ ಮಲ್ಲಪ್ಪ ಎಂಬುವರ ಮನೆಯ ಚಾವಣಿಗಳು ಹಾರಿ ಹೋಗಿದ್ದು, ಅನೇಕ ವಸ್ತುಗಳು ಮಳೆ ನೀರಲ್ಲಿ ಕೊಚ್ಚಿ ಹೋಗಿವೆ.

ಹಿರೆಮ್ಯಾಗಳಗೆರೆ ಗ್ರಾಮದಲ್ಲಿ 20 ಕ್ಕೂ ಹೆಚ್ಚು ಮನೆಗಳಿಗೆ ಹಾನಿಯಾಗಿದ್ದು, ನಿರ್ಮಾಣ ಹಂತದಲ್ಲಿದ್ದ ಕಡ್ಲೆಬಾಳು ಕೊಂಡಜ್ಜಿ ಮಾರ್ಗದ ರಸ್ತೆ ಹಳ್ಳದ ನೀರಿಗೆ ಕೊಚ್ಚಿ ಹೋಗಿ ರಸ್ತೆ ಸಂಪರ್ಕ ಕಡೆದು ಹೋಗಿದೆ.

ಇನ್ನು ಕಕ್ಕರಗೊಳ್ಳ, ಮಾಗನಹಳ್ಳಿ ಸೇರಿದಂತೆ ವಿವಿಧ ಭಾಗಗಳಲ್ಲಿ ಅಪಾರ ಪ್ರಮಾಣದ ಭತ್ತ, ಬಾಳೆ, ಮೆಕ್ಕೆಜೋಳ ನೆಲ್ಲಕ್ಕುರಳಿದ್ದು ರೈತರನ್ನು ಸಂಕಷ್ಟಕ್ಕೆ ಸಿಲುಕಿಸುವಂತೆ ಮಾಡಿದೆ.

ವರದಿ : ಮಹಮ್ಮದ್ ಅಬ್ದುಲ್ ರಖೀಬ್

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ… 

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.