ಕೆ.ಎನ್.ಪಿ.ವಾರ್ತೆ,ದಾವಣಗೆರೆ,ಆ.21;

ಧಾರವಾಡ ಜಿಲ್ಲೆಯ ಕುಂದಗೋಳ ಯಲಿವಾಳ ಗ್ರಾಮದ ಯುವ ಪ್ರತಿಭೆ ಮಂಜುನಾಥ ಮೆಣಸಿನಕಾಯಿ ಅವರಿಗೆ ಕರ್ನಾಟಕ ಜ್ಯೋತಿ ರಾಜ್ಯ ಪ್ರಶಸ್ತಿ ಪ್ರಧಾನ ಮಾಡಲಾಯಿತು.

ರವಿವಾರ ದಾವಣಗೆರೆಯ ಚನ್ನಗಿರಿ ವಿರೂಪಾಕ್ಷಪ್ಪ ಕಲ್ಯಾಣ ಮಂಟಪದಲ್ಲಿ ನಡೆದ ಸಾಹಿತ್ಯ ಮತ್ತು ಸಂವಿಧಾನದ ಆಶಯಗಳ ಕುರಿತ ರಾಷ್ಟ್ರೀಯ ವಿಚಾರ ಸಂಕಿರಣ ಕಾರ್ಯಕ್ರಮದಲ್ಲಿ ಮಂಜುನಾಥ ಬಸವರಾಜ ಮೆಣಸಿನಕಾಯಿ ಯವರಿಗೆ ಪ್ರಶಸ್ತಿ ಪ್ರದಾನ ಮಾಡಿ ಸನ್ಮಾನಿಸಲಾಯಿತು.

ದಾವಣಗೆರೆಯ ಭಾರತಿಯ ಕಲಾ ಸಾ೦ಸ್ಕೃತಿಕ ಅಕಾಡೆಮಿಯ 2018 /2019ನೇ ಸಾಲಿನ ”ಕರ್ನಾಟಕ ಜ್ಯೋತಿ” ರಾಜ್ಯ ಪ್ರಶಸ್ತಿಗೆ ಧಾರವಾಡ ಜಿಲ್ಲೆಯ ಕುಂದಗೋಳ ತಾಲ್ಲೂಕಿನ ಯಲಿವಾಳ ಗ್ರಾಮದ ಯುವ ಪ್ರತಿಭೆ ಮಂಜುನಾಥ. ಬ. ಮೆಣಸಿನಕಾಯಿ ಯವರು ಭಾಜನಾಗಿದ್ದಾರೆ. ಕನ್ನಡ ನಾಡು ನುಡಿ ಹಾಗೂ ಸಮಾಜಕ್ಕೆ ಸಲ್ಲಿಸುತ್ತಿರುವ ನಿಸ್ವಾರ್ಥ ಸೇವೆಯನ್ನು ಗುರುತಿಸಿ. ಮಂಜುನಾಥ ಮೆಣಸಿನಕಾಯಿ ಯವರಿಗೆ ಈ ಪ್ರಶಸ್ತಿಯನ್ನು ನೀಡಲಾಗಿದೆ ಎಂದು ಅಕಾಡೆಮಿಯ ಸಂಸ್ಥಾಪಕ ಅಧ್ಯಕ್ಷರಾದ ಎನ್ ಮಲ್ಲೇಶಪ್ಪ ರವರು ತಿಳಿಸಿದ್ದಾರೆ.

http://karnatakanewsportal.com/rajya-prashastige-manjunath-mennasinakayi-ayke/

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ… 

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.