ಕೆ.ಎನ್.ಪಿ.ವಾರ್ತೆ,ಹಾವೇರಿ,ನ.29;

ಮನುಷ್ಯನ ಜೀವನದಲ್ಲಿ ಬಂದಿರುವ ಕಷ್ಟಕಾರ್ಪಣ್ಯಗಳ ದಮನ ಮಾಡುವ ಶಕ್ತಿ ದೀಪಕ್ಕಿದೆ ಎಂದು ಬನ್ನಿಕೊಪ್ಪ ಹಿರೇಮಠದ ಡಾ.ಮುಮ್ಮಡಿ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಹೇಳಿದರು.

ತಾಲೂಕಿನ ನೆಗಳೂರ ಸಂಸ್ಥಾನ ಹಿರೇಮಠದಲ್ಲಿ ಜರುಗಿದ ಕಾರ್ತಿಕ ದೀಪೋತ್ಸವ ಸಮಾರಂಭದ ಸಾನ್ನಿಧ್ಯವಹಿಸಿ ಆರ್ಶೀವಚನ ನೀಡಿದರು. ಪ್ರತಿ ಮನುಷ್ಯ ತನ್ನ ಸಂಸಾರಿಕ ಜೀವನದಲ್ಲಿ ಪಾಪಕರ್ಮಗಳು ದಮನ ವಾಗಬೇಕಾದರೆ ಭಕ್ತಿ ಯಿಂದ ಭಗವಂತನಿಗೆ ದೀಪಬೆಳಗಿದರೆ ಸಾಕು ಭಗವಂತನ ಕೃಪೆಯಾಗುವುದು ಎಂದರು.

ಗುರುಶಾಂತೇಶ್ವರ ಶಿವಾಚಾರ್ಯ ಸ್ವಾಮೀಜಿ ಮಾತನಾಡಿ, ಕಾರ್ತಿಕ ಮಾಸದಲ್ಲಿ ದೇವರಿಗೆ ಸಂಕಲ್ಪ ಮಾಡಿ ದೀಪ ಬೆಳಗಿದರೆ ಜೀವನದಲ್ಲಿ ಸುಖ ಶಾಂತಿ ನೆಮ್ಮದಿ ಪ್ರಾಪ್ತಿಯಾಗುತ್ತದೆ ಎಂದರು.

ಮನುಷ್ಯನ ಕಷ್ಟಕಾರ್ಪಣ್ಯಗಳನ್ನು ದಮನ ಮಾಡುವ ಶಕ್ತಿ ದೀಪಕ್ಕಿದೆ : ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ

ಸಮಾರಂಭದಲ್ಲಿ ಉಪನ್ಯಾಸಕ ಪ್ರಮೋದ ನವಗಾಲ ನೆಗಳೂರ ಸುಕ್ಷೇತ್ರ ಕುರಿತು ಉಪನ್ಯಾಸ ನೀಡಿದರು. ಸಮಾರಂಭದಲ್ಲಿ ನೆಗಳೂರ ಗುತ್ತಲ ಬೆಳವಿಗಿ ಹೊಸಹೊನ್ನತ್ತಿ ಗ್ರಾಮಗಳಿಂದ ಸದ್ಭಕ್ತರು ಪಾಲ್ಗೊಂಡಿದ್ದರು.

ಇದೇ ಸಂದರ್ಭದಲ್ಲಿ ಡಿಸೆಂಬರ್ ತಿಂಗಳಲ್ಲಿ ಜರುಗಲಿರುವ ಕೇದಾರ ಜಗದ್ಗುರುಗಳ ಇಷ್ಟಲಿಂಗ ಮಹಾ ಪೂಜೆ ಹಾಗೂ ಅಡ್ಡ ಪಲ್ಲಕ್ಕಿ ಉತ್ಸವ ಧರ್ಮ ಸಮಾರಂಭದ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆ ಮಾಡಿದರು. ಗುರುಶಾಂತೇಶ್ವರ ಮೇಲೋಡಿಸ್ ವತಿಯಿಂದ ಭಕ್ತಿ ಸಂಗೀತ ಕಾರ್ಯಕ್ರಮ ಜರುಗಿತು.

ವರದಿ : ಗುರುಶಾಂತಸ್ವಾಮಿ ಹಿರೇಮಠ

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ…

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.