ಕೆ.ಎನ್.ಪಿ.ವಾರ್ತೆ,ದಾವಣಗೆರೆ,ಏ.13;

ಜಗಳೂರು ಪಟ್ಟಣದಲ್ಲಿ ಭಾರತೀಯ ಚುನಾವಣಾ ಆಯೋಗ ಹಾಗೂ ಪಟ್ಟಣ ಪಂಚಾಯಿತಿ ವತಿಯಿಂದ ಲೋಕಸಭಾ ಸಾರ್ವತ್ರಿಕ ಚುನಾವಣೆ ಅಂಗವಾಗಿ ಮತದಾನ ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ತಹಶಿಲ್ದಾರ್ ತಿಮ್ಮಪ್ಪ ಉಜ್ಜಯಿನಿರವರು ಬೈಕ್ ರ್ಯಾಲಿಗೆ ಚಾಲನೆ ನೀಡಿದರು.

ಪಟ್ಟಣದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಮತದಾನ ಜಾಗೃತಿಯಲ್ಲಿ ಸಂತೆಯಲ್ಲಿ ಕರಪತ್ರ ನೀಡುವ ಮೂಲಕ ಪಟ್ಟಣದ ಮುಖ್ಯ ಬೀದಿಗಳಲ್ಲಿ ವಿಧ್ಯಾನಗರ, ಇಮಾಂ ಬಡವಾಣೆ, ಇಂದಿರಾ ಬಡಾವಣೆ, ಅಶ್ವಥ್‍ರಡ್ಡಿನಗರ ಸೇರಿದಂತೆ ವಿವಿಧ ಬಡಾವಣೆಗಳಲ್ಲಿ ಬೈಕ್ ಹಾಗೂ ಆಟೋ ರ್ಯಾಲಿಯ ಮೂಲಕ ಮತದಾನದ ಜಾಗೃತಿ ಗೀತೆಗಳನ್ನು ಹಾಡುತ್ತಾ ಜಾಗೃತಿ ಮೂಡಿಸಿ ಮತದಾನದ ಅರಿವು ಮೂಡಿಸಿದರು.

ಈ ಸಂದರ್ಭದಲ್ಲಿ, ಪಟ್ಟಣ ಪಂಚಾಯಿತಿ ಮುಖ್ಯ ಅಧಿಕಾರಿ ಕಂಪಳಮ್ಮ, ಆರೋಗ್ಯ ನಿರೀಕ್ಷಕರು ಕಿಫಾಯತ್, ಕಂದಾಯ ನಿರೀಕ್ಷಕರು ಸಂತೋಷ ಸೇರಿಂತೆ ಸಿಬ್ಬಂದಿ ವರ್ಗದವರು ಹಾಜರಿದ್ದರು.

ವರದಿ : ಮಹಮ್ಮದ್ ಅಬ್ದುಲ್ ರಖೀಬ್

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ… 

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.