ಕೆ.ಎನ್.ಪಿ.ವಾರ್ತೆ,ಮುಂಡರಗಿ,ಏ.01;

ಪ್ರಜಾಪ್ರಭುತ್ವದಲ್ಲಿ ಮತದಾರರು ತಮ್ಮ ಹಕ್ಕನ್ನು ಚಲಾಯಿಸಿ ಬಲಿಷ್ಠ ರಾಷ್ಟ್ರ ನಿರ್ಮಾಣಕ್ಕೆ ಮುಂದಾಗಬೇಕು ಎಂದು ಬಿಇಒ ಹಳ್ಳಿಗುಡಿ ಮನವಿ ಮಾಡಿಕೊಂಡರು.

ಪಟ್ಟಣದಲ್ಲಿ ಶಿಕ್ಷಣ ಇಲಾಖೆಯ ಆಶ್ರಯದಲ್ಲಿ ಮತದಾನ ಜಾಗೃತಿಗಾಗಿ ಬಿಇಒ ಎಸ್.ಎನ್.ಹಳ್ಳಿಗುಡಿ ಅವರ ನೇತೃತ್ವದಲ್ಲಿ ಭಾನುವಾರ ಬೈಕ್‍ರ್ಯಾಲಿ ನಡೆಸಲಾಯಿತು.

ಮತದಾನ ಪ್ರಜಾಫ್ರಭುತ್ವದ ನಿಯಮ, ಮತದಾನ ನಮ್ಮ ಹಕ್ಕು, ಬಲಿಷ್ಠ ರಾಷ್ಟ್ರ ನಿರ್ಮಾಣಕ್ಕೆ ಒಬ್ಬ ಬಲಿಷ್ಠ ಮತ್ತು ಸಮರ್ಥ ನಾಯಕ ಬೇಕಾಗಿದೆ, ಹಾಗಾಗಿ ಚುನಾವಣೆ ಸಮೀಪಿಸಿದಂತೆ ಮತದಾರರಿಗೆ ಮತದಾನದ ಮಹತ್ವ ಮತ್ತು ಸಮರ್ಥ ನಾಯಕ ಆಯ್ಕೆ ಸರಿ ಇರಬೇಕು ಎಂಬುದಾಗಿ ಮತದಾನ ಜಾಗೃತಿಯನ್ನು ಮೂಡಿಸುವ ಪ್ರಯತ್ನ ನಡೆಯುತ್ತದೆ.

ಸಮಾಜ ಕಲ್ಯಾಣ ಇಲಾಖೆ ಬಿ.ಎನ್.ರಾಟಿ, ನಿಂಗು ಸೊಲಗಿ, ಆರ್.ಎಲ್.ಬಾದಾಮಿ, ಪಿ.ಬಿ.ಗದ್ದಿಗೌಡ್ರ, ಎಸ್.ಡಿ.ಬಸೇಗೌಡ್ರ, ಎಸ್.ಆರ್.ರಿತ್ತಿ, ಬಿ.ವಿ.ನಂದಗಾವಿ, ಎಚ್.ವೈ.ಭಜಂತ್ರಿ, ಎಸ್.ಸಿ.ಚಕ್ಕಡಿಮಠ, ಇದ್ದರು.

ವರದಿ : ಕೋಗಳಿ ಶೇಖರ್

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ… 

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.