ಕೆ.ಎನ್.ಪಿ.ವಾರ್ತೆ,ಕೊಪ್ಪಳ,ಆ.03;
ಕೊಪ್ಪಳ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕಾಗಿ ಅರ್ಹ ವಿದ್ಯಾರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಮೆಟ್ರಿಕ್ ನಂತರದ ಮೆಡಿಕಲ್ & ಇಂಜಿನಿಯರಿಂಗ್, ಸ್ನಾತಕೋತ್ತರ, ವೃತ್ತಿಪರ ಹಾಗೂ ನರ್ಸಿಂಗ್ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕಾಗಿ ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ-1, 2ಎ, 2ಬಿ, 3ಎ, 3ಬಿ, ಪರಿಶಿಷ್ಟ ಜಾತಿ/ ಪರಿಶಿಷ್ಟ ವರ್ಗ ಮತ್ತು ಇತರೆ ಜನಾಂಗಗಳಿಗೆ ಸೇರಿದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಸಲು ಪ್ರವರ್ಗ-1, ಎಸ್.ಸಿ. ಮತ್ತು ಎಸ್.ಟಿ. ವಿದ್ಯಾರ್ಥಿಗಳ ಪೋಷಕರ ವಾರ್ಷಿಕ ಆದಾಯ ರೂ. 2.50 ಲಕ್ಷ ಹಾಗೂ ಪ್ರವರ್ಗ-2ಎ, 2ಬಿ, 3ಎ, 3ಬಿ ಇತರೆ ಹಿಂದುಳಿದ ವರ್ಗ ಮತ್ತು ಇತರೆ ವಿದ್ಯಾರ್ಥಿಗಳ ಪೋಷಕರ ವಾರ್ಷಿಕ ಆದಾಯ ರೂ. 01 ಲಕ್ಷ ಮಿತಿಯಲ್ಲಿರಬೇಕು. ಅರ್ಜಿ ಸಲ್ಲಿಸಲು ಹಾಗೂ ತಾಲೂಕುವಾರು ವಿದ್ಯಾರ್ಥಿನಿಲಯಗಳ ವಿವರ, ವಿದ್ಯಾರ್ಥಿನಿಲಯದ ಪ್ರವೇಶಕ್ಕೆ ಇರಬೇಕಾದ ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳ ವಿವರ ಮತ್ತು ಸರ್ಕಾರದ ಆದೇಶಕ್ಕಾಗಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವೆಬ್‍ಸೈಟ್ www.backwardclasses.kar.nic.in ನ್ನು ನೋಡಬಹುದಾಗಿದೆ.
ಅರ್ಜಿ ಸಲ್ಲಿಸಲು ತಾಂತ್ರಿಕ ತೊಂದರೆಗಳಾದಲ್ಲಿ ಇ-ಮೇಲ್ bcmhosteladmission@gmail.com ಮುಖಾಂತರ ಅಥವಾ ಜಿಲ್ಲಾ/ ತಾಲೂಕು ಅಧಿಕಾರಿಗಳು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಇವರನ್ನು ಅಗತ್ಯ ದಾಖಲೆಗಳೊಂದಿಗೆ ಭೇಟಿ ನೀಡಬಹುದು ಹಾಗೂ ಸಹಾಯವಾಣಿ ಸಂಖ್ಯೆ 8050370006 ಕ್ಕೆ ಸಂಪರ್ಕಿಸಬಹುದು ಎಂದು ಕೊಪ್ಪಳ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ…
ನೀವು ಕೂಡ ಬರೆಯಬಹುದು :
ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.
ಈ-ವಿಳಾಸ : karnatakanewsportal@gmail.com
ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.