ಕೆ.ಎನ್.ಪಿ.ವಾರ್ತೆ,ಮುಜಾಫರನಗರ,ಮಾ.16;

ಜೀವನದ ಕುರಿತು ಆಶಾಗೋಪರವನ್ನೇ ಕಟ್ಟಿಕೊಂಡು ಮದುವೆಯಾಗಿದ್ದ ನವ ವಧುವಿಗೆ ಮೊದಲ ರಾತ್ರಿಯಂದೆ ಗಂಡ ಹಾಗೂ ಆತನ ತಮ್ಮ ಇಬ್ಬರು ಸೇರಿಕೊಂಡು ಭೀಕರವಾಗಿ ಅತ್ಯಾಚಾರ ಮಾಡಿದ್ದು, ಪರಿಣಾಮವಾಗಿ ತೀವ್ರ ರಕ್ತಸ್ರಾವದಿಂದ ನವ ವಧು ಸಾವು ಬದುಕಿನ ನಡುವೆ ಹೋರಾಡುತ್ತಿದ್ದಾಳೆ.

ಉತ್ತರ ಪ್ರದೇಶ ಮುಜಾಫರನಗರದ ಹೊರವಲಯದಲ್ಲಿರುವ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಮೊದಲ ದಿನದ ರಾತ್ರಿ ಗಂಡ ಹಾಗೂ ಆತನ ತಮ್ಮ ಇಬ್ಬರು ಸೇರಿ ಅತ್ಯಾಚಾರ ನಡೆಸಿದ್ದಾರೆ. ಪರಿಣಾಮ ಆಕೆಗೆ ತೀವ್ರ ರಕ್ತಸ್ರಾವವಾಗಿದೆ. ಬೆಳಗ್ಗೆ ನೋವಿನಿಂದ ನರಳುತ್ತಿದ್ದ ನವ ವಧುವನ್ನು ಕೂಡಲೇ ಆಸ್ಪತ್ರೆಗೆ ಸೇರಿಸಲಾಗಿದ್ದು, ವೈದ್ಯರು ಆಕೆಗೆ ಶಸ್ತ್ರ ಚಿಕಿತ್ಸೆ ಮಾಡಿದ್ದಾರೆ ಎನ್ನಲಾಗಿದೆ.

ನವ ವಧುವಿನ ಪೋಷಕರ ದೂರಿನ ಮೇರೆಗೆ ಪೊಲೀಸರು ಇಬ್ಬರು ಆರೋಪಿಗಳ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಿಸಿದ್ದಾರೆ. ಇದೇ ವೇಳೆ ವರದಕ್ಷಿಣೆಗೆ ಪೀಡಿಸುತ್ತಿದ್ದರು ಎಂದು ದೂರಿನಲ್ಲಿ ಹೇಳಲಾಗಿದೆ.

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ… 

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.