ಕೆ.ಎನ್.ಪಿ.ವಾರ್ತೆ,ಬೆಂಗಳೂರು,ಆ.14;

ಸಾಹಿತ್ಯ ಕ್ಷೇತ್ರದ ದಿಗ್ಗಜ ಎಸ್‌.ಎಲ್‌. ಭೈರಪ್ಪ ಅವರು ಈ ಬಾರಿಯ ಮೈಸೂರು ದಸರಾ ಉದ್ಘಾಟನೆ ಮಾಡಲಿದ್ದಾರೆ. ಬೆಂಗಳೂರ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಈ ಕುರಿತು ತೀರ್ಮಾನ ಕೈಗೊಳ್ಳಲಾಗಿದೆ.

ಕರ್ನಾಟಕ ಪ್ರಸ್ತುತ ಪ್ರವಾಹ ಪರಿಸ್ಥಿತಿಗೆ ತುತ್ತಾಗಿದ್ದು ಈ ಹಿನ್ನೆಲೆಯಲ್ಲಿ ಸರಳವಾಗಿ ದಸರಾ ಆಚರಣೆಗೆ ತೀರ್ಮಾನಿಸಲಾಯಿತು. ಇನ್ನು ದಸರಾ ಉದ್ಘಾಟನೆಗೆ ಎಸ್ಎಲ್ ಭೈರಪ್ಪನವರಿಗೆ ಆಹ್ವಾನ ನೀಡಲು ಸಭೆಯಲ್ಲಿ ನಿರ್ಧರಿಸಲಾಯಿತು ಎಂದು ಸಭೆಯ ನಂತರ ಯಡಿಯೂರಪ್ಪ ತಿಳಿಸಿದರು.

ರಾಜ್ಯದಲ್ಲಿ ಅತಿವೃಷ್ಟಿ, ಅನಾವೃಷ್ಟಿ ಪರಿಸ್ಥಿತಿ ಇದೆ. ಆದರೂ ಕೆಲವು ಸಂಪ್ರದಾಯವನ್ನು ಹಿಂದಿನಿಂದಲೂ ಪಾಲಿಸಿಕೊಂಡು ಬಂದಿದ್ದೇವೆ. ಆದ್ದರಿಂದ ಈ ಬಾರಿಯೂ ನಾಡಹಬ್ಬವನ್ನು ಆಚರಿಸಲು ನಿರ್ಧರಿಸಿದ್ದೇವೆ. 

ದಸರಾ ಹಿನ್ನೆಲೆಯಲ್ಲಿ ಸಾಂಸ್ಕೃತಿಕ ರಾಜಧಾನಿಯಲ್ಲಿ ಕಾಮಗಾರಿಗಳನ್ನು ಕೈಗೊಳ್ಳಲು ತ್ವರಿತವಾಗಿ 20 ಕೋಟಿ ರೂಪಾಯಿ ಬಿಡುಗಡೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ತಿಳಿಸಿದರು.

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ… 

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.