ಕೆ.ಎನ್.ಪಿ.ವಾರ್ತೆ,ಬೆಂಗಳೂರು,ಆ.12;
ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ನಾಳೆ ಬೀದರ್ ಗೆ ಭೇಟಿ ನೀಡಲಿದ್ದು, ಬೃಹತ್ ಸಮಾವೇಶ ಉದ್ದೇಶಿಸಿ ಮಾತನಾಡಲಿದ್ದಾರೆ.
ಬೀದರ್‍ನ ನೆಹರೂ ಕ್ರೀಡಾಂಗಣದಲ್ಲಿ ಕೆಪಿಸಿಸಿ ಆಯೋಜಿಸಿರುವ ಜನಧ್ವನಿ ಕಾರ್ಯಕ್ರಮಕ್ಕೆ ನಾಳೆ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಚಾಲನೆ ನೀಡುವ ಮೂಲಕ ಚುನಾವಣೆಯ ರಣಕಹಳೆ ಮೊಳಗಿಸಲಿದ್ದು, ಸುಮಾರು 2 ಲಕ್ಷ ಜನ ಕಾರ್ಯಕರ್ತರನ್ನು ಸೇರಿಸುವ ಮೂಲಕ ಕಾಂಗ್ರೆಸ್ ಶಕ್ತಿ ಪ್ರದರ್ಶನಕ್ಕೆ ಮುಂದಾಗಿದೆ.
ರಾಹುಲ್ ಗಾಂಧಿ ಬೀದರ್‌ನಲ್ಲಿ ಬೃಹತ್ ಸಮಾವೇಶ ಉದ್ದೇಶಿಸಿ ಮಾತನಾಡಲಿದ್ದು, 2018ರ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಿದ ಜನರಿಗೆ ಕೃತಜ್ಞತೆ ಸಲ್ಲಿಸಲಿದ್ದಾರೆ.
ರಾಜ್ಯದಲ್ಲಿ ಮೈತ್ರಿ ಸರ್ಕಾರ ಅಸ್ತಿತ್ವಕ್ಕೆ ಬಂದು, ಹೊಸ ಕೆಪಿಸಿಸಿ ಅಧ್ಯಕ್ಷರ ನೇಮಕವಾದ ಬಳಿಕ ಮೊದಲ ಬಾರಿಗೆ ರಾಹುಲ್ ಗಾಂಧಿ ರಾಜ್ಯಕ್ಕೆ ಆಗಮಿಸುತ್ತಿದ್ದು, ಕರ್ನಾಟಕದ ಕಾಂಗ್ರೆಸ್ ನಾಯಕರೊಂದಿಗೆ 2019ರ ಲೋಕಸಭೆ ಚುನಾವಣೆ ಸಿದ್ಧತೆ ಕುರಿತು ಚರ್ಚೆ ನಡೆಸಲಿದ್ದಾರೆ.
ಉತ್ತರ ಕರ್ನಾಟಕದಲ್ಲಿ ಪಕ್ಷದ ಶಕ್ತಿಯನ್ನು ವೃದ್ಧಿಸಿಕೊಂಡರೆ ಹೆಚ್ಚಿನ ಲೋಕಸಭಾ ಸ್ಥಾನಗಳನ್ನು ಪಡೆಯಬಹುದು ಎಂಬ ದೃಷ್ಠಿಕೋನದಿಂದ ಬೀದರ್ ಜಿಲ್ಲೆಯನ್ನು ಆಯ್ಕೆ ಮಾಡಿಕೊಂಡಿದ್ದು, ಅಲ್ಲಿಂದ ಪ್ರಚಾರವನ್ನು ಆರಂಭಿಸುವ ಮೂಲಕ ಕಾಂಗ್ರೆಸ್ ಚುನಾವಣಾ ಪ್ರಚಾರ ಕಣಕ್ಕೆ ಧುಮುಕಲಿದೆ.
ಸಮಾವೇಶದ ಹಿನ್ನೆಲೆಯಲ್ಲಿ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಪಕ್ಷದ ಘಟಾನುಘಟಿ ನಾಯಕರ ದಂಡು ಬೀದರ್‍ಗೆ ಆಗಮಿಸಿದ್ದು, ಎಲ್ಲಾ ಸಿದ್ಧತೆಗಳನ್ನು ಕೈಗೊಂಡಿದ್ದಾರೆ.
ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ…
ನೀವು ಕೂಡ ಬರೆಯಬಹುದು :
ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.
ಈ-ವಿಳಾಸ : karnatakanewsportal@gmail.com
ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.