ಕೆ.ಎನ್.ಪಿ.ವಾರ್ತೆ,ಬೆಂಗಳೂರು,ಆ.14;

ರಾಜ್ಯದಲ್ಲಿ ಭಾರೀ ಪ್ರವಾಹ ಉಂಟಾಗಿರುವ ಮಧ್ಯೆಯೇ ಸ್ವಾತಂತ್ರ್ಯೋತ್ಸವ ಆಚರಣೆಗೆ ಬೆಂಗಳೂರು ಸೇರಿದಂತೆ ರಾಜ್ಯದ ಜಿಲ್ಲೆಗಳು ಸಿದ್ಧಗೊಂಡಿದ್ದು, ಎಲ್ಲಾ ಅಗತ್ಯ ಪೂರ್ವ ತಯಾರಿಗಳನ್ನು ಕೈಗೊಳ್ಳಲಾಗಿದೆ.

ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿರುವ ಹಿನ್ನೆಲೆಯಲ್ಲಿ ಈ ಬಾರಿಯ ಸ್ವಾತಂತ್ರ್ಯೋತ್ಸವವನ್ನು ಸರಳವಾಗಿ ಆಚರಿಸಲು ಸರ್ಕಾರ ಆದೇಶ ಹೊರಡಿಸಿದೆ. ಸಚಿವ ಸಂಪುಟ ವಿಸ್ತರಣೆಯಾಗದ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರ ನೇಮಕವಾಗದ ಹಿನ್ನೆಲೆಯಲ್ಲಿ ಜಿಲ್ಲಾ ಕೇಂದ್ರಗಳಲ್ಲಿ ಆಯಾ ಜಿಲ್ಲಾಧಿಕಾರಿಗಳೇ ಧ್ವಜಾರೋಹಣ ನೆರವೇರಿಸುವಂತೆ ಆದೇಶದಲ್ಲಿ ತಿಳಿಸಲಾಗಿದೆ.

ಸ್ವಾತಂತ್ರ್ಯೋತ್ಸವದ ಪ್ರಧಾನ ಸಮಾರಂಭ ನಡೆಯುವ ಬೆಂಗಳೂರಿನ ಫೀಲ್ಡ್ ಮಾರ್ಷಲ್ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಸಕಲ ಸಿದ್ಧತೆ ಕೈಗೊಳ್ಳಲಾಗಿದ್ದು, ಬೃಹತ್ ವೇದಿಕೆ ನಿರ್ಮಿಸಲಾಗಿದೆ. ಶಾಮಿಯಾನ, ವೇದಿಕೆಯ ನಿರ್ಮಾಣ, ಬ್ಯಾರಿಕೇಡಿಂಗ್, ಆಸನಗಳ ವ್ಯವಸ್ಥೆ ಮಾಡಲಾಗಿದೆ.  ವೇದಿಕೆಗೆ ಅಲಂಕಾರಿಕ ಬ್ರಾಸ್ ಪರಿಕರಗಳನ್ನು ಅಳವಡಿಸಲಾಗಿದೆ, ಮಳೆ ಬಂದರೂ ಯಾವುದೇ ತೊಂದರೆಯಾಗದಂತೆ ವ್ಯವಸ್ಥೆ ಕಲ್ಪಿಸಲಾಗಿದೆ.

ನಾಳೆ ಬೆಳಗ್ಗೆ 9 ಗಂಟೆಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ರಾಷ್ಟ್ರ ಧ್ವಜಾರೋಹಣ ನೆರವೇರಿಸಲಿದ್ದು, ಈ ಸಂದರ್ಭದಲ್ಲಿ ಭಾರತೀಯ ವಾಯುಪಡೆಯ ಹೆಲಿಕಾಪ್ಟರ್ ನಲ್ಲಿ ಪುಷ್ಪವೃಷ್ಟಿ ಮಾಡಲಾಗುತ್ತದೆ.

ಬಳಿಕ ಮುಖ್ಯಮಂತ್ರಿ ಪರೇಡ್ ವೀಕ್ಷಿಸಿ, ಗೌರವ ರಕ್ಷೆ ಸ್ವೀಕರಿಸುತ್ತಾರೆ. ಸ್ವಾತಂತ್ರ್ಯೋತ್ಸವದ ಸಂದೇಶ ನೀಡುತ್ತಾರೆ. ನಂತರ ಜವಾಹರ್ ನವೋದಯ ಶಾಲಾ ಮಕ್ಕಳಿಂದ ರಾಷ್ಟ್ರಗೀತೆ ಮೊಳಗಲಿದೆ.

ಮೈದಾನಕ್ಕೆ ಸೂಕ್ತ ಬಂದೋಬಸ್ತ್ ಏರ್ಪಡಿಸಲಾಗಿದ್ದು, ಮೈದಾನದಲ್ಲಿ ಭದ್ರತೆ ಮತ್ತು ಸುರಕ್ಷತೆಗಾಗಿ ಒಟ್ಟು 1906 ಪೊಲೀಸ್ ಸಿಬ್ಬಂದಿಯನ್ನು, 50 ಸಿಸಿ ಕ್ಯಾಮೆರಾ, 4 ಬ್ಯಾಗೇಜ್ ಸ್ಕ್ಯಾನರ್ ಮತ್ತು ವ್ಯವಸ್ಥಿತ ಸಂಚಾರ ನಿಯಂತ್ರಣ ವ್ಯವಸ್ಥೆಯನ್ನು ಅಳವಡಿಸಲಾಗಿದೆ. ಯಾವುದೇ ಆಕಸ್ಮಿಕ ವಿಪತ್ತು ಸಂಭವಿಸಿದಲ್ಲಿ ತಕ್ಷಣ ಪ್ರತಿಕ್ರಿಯಿಸಲು ಅಗತ್ಯವಿರು ವಷ್ಟು ಆಂಬುಲೆನ್ಸ್, ವೈದ್ಯಕೀಯ ಮತ್ತು ವೈದ್ಯಕೀಯೇತರ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ನಗರದ ಹಲವು ಆಸ್ಪತ್ರೆಗಳನ್ನು ಗುರುತಿಸಿ ಸಾಕಷ್ಟು ಸಂಖ್ಯೆಯಲ್ಲಿ ಹಾಸಿಗೆಗಳನ್ನು ಕಾಯ್ದಿರಿಸಲಾಗಿದೆ.

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ… 

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.