ಕೆ.ಎನ್.ಪಿ.ವಾರ್ತೆ,ಬೆಂಗಳೂರು,ಜೂ.06;
ನಲಪಾಡ್ ಜಾಮೀನು ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಜೂ.11ಕ್ಕೆ ಮುಂದೂಡಿದೆ.
ಉದ್ಯಮಿ ಪುತ್ರ ವಿದ್ವತ್ ಮೇಲೆ ಹಲ್ಲೆ ನಡೆಸಿದ ಆರೋಪದಡಿ ಜೈಲು ಪಾಲಾಗಿರುವ ಶಾಸಕ ಎನ್.ಎ.ಹ್ಯಾರೀಸ್ ಅವರ ಪುತ್ರ ಮೊಹಮದ್ ನಲಪಾಡ್ ಜಾಮೀನು ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಜೂ.11ಕ್ಕೆ ಮುಂದೂಡಿದೆ.
ಮೊಹಮದ್ ನಲಪಾಡ್ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಹೈಕೋರ್ಟ್ ಏಕಸದಸ್ಯ ಪೀಠವು ಇಂದು ವಿಚಾರಣೆ ನಡೆಸಿತು. ಜಾಮೀನು ಅರ್ಜಿಗೆ ಸಂಬಂಧಿಸಿದಂತೆ ಆಕ್ಷೇಪಣೆ ಸಲ್ಲಿಸಲು ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಅವರಿಗೆ ನೋಟಿಸ್ ಜಾರಿಗೊಳಿಸಲು ಹೈಕೋರ್ಟ್ ಆದೇಶಿಸಿದ್ದು, ನಲಪಾಡ್ ಜಾಮೀನು ಅರ್ಜಿ ವಿಚಾರಣೆಯನ್ನು ಜೂ.11ಕ್ಕೆ ಮುಂದೂಡಿದೆ.
ನೀವು ಕೂಡ ಬರೆಯಬಹುದು :
ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.
9513326661
ಈ-ವಿಳಾಸ : karnatakanewsportal@gmail.com
ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.