ಕೆ.ಎನ್.ಪಿ.ವಾರ್ತೆ,ಬೆಂಗಳೂರು,ಜ.05;

ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮತದಾರರ ಪಟ್ಟಿ ಪರಿಷ್ಕರಣೆಗಾಗಿ ಜನವರಿ 6 ರಿಂದ 8 ರವರೆಗೆ ವಿಶೇಷ ನೊಂದಣಿ ಅಭಿಯಾನ ಹಮ್ಮಿಕೊಳ್ಳಲಾಗಿದೆ.
2020ರ ಜನವರಿ 1 ರಂದು 18 ವರ್ಷ ತುಂಬಿದ ನವ ಮತದಾರರ ಹೆಸರು ಸೇರ್ಪಡೆಗೆ ಹಾಗೂ ಈಗಾಗಲೇ ಮತದಾರರ ಚೀಟಿಗೆ ನೊಂದಾಯಿಸಿಕೊಂಡಿರುವವರು ಮಾಹಿತಿ ಸರಿಪಡಿಸಲು ಈ ಅಭಿಯಾನದ ಅವಧಿಯಲ್ಲಿ ಅವಕಾಶ ಕಲ್ಪಿಸಲಾಗುವುದು.

ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರನ್ನು ನೋಂದಾಯಿಸಿಕೊಳ್ಳಲು ಚುನಾವಣಾ ಆಯೋಗ ‘ಮಿಂಚಿನ ನೋಂದಣಿ’ ಅಭಿಯಾನ ಆರಂಭಿಸಿದೆ. ನಿಮ್ಮ ಹೆಸರನ್ನು ತಪ್ಪದೇ ಸೇರಿಸಿರಿ..

ಮತದಾರರ ಪಟ್ಟಿಗೆ ಸೇರ್ಪಡಿಸಲು ಬೇಕಾದ ದಾಖಲೆಗಳು ಹೀಗಿವೆ…

  • ಹುಟ್ಟಿದ ದಿನಾಂಕ/ವಯಸ್ಸಿನ ದೃಢೀಕರಣ
  • ವಿಳಾಸದ ದೃಢೀಕರಣ
  • ಪಾಸ್ ಪೋರ್ಟ್ ಅಳತೆಯ ಫೋಟೋಗಳು

nvsp.in ಅಥವಾ Voter Helpline App ಮೂಲಕ ನೋಂದಣಿ ಮಾಡಬಹುದು.

ಮೈಸೂರು, ರಾಮನಗರ, ಚಿಕ್ಕಬಳ್ಳಾಪುರ, ಚಾಮರಾಜನಗರ, ದಾವಣಗೆರೆ, ಮಂಡ್ಯ, ಕೊಡಗು, ಬಳ್ಳಾರಿ ಸೇರಿ ಹಲವು ಜಿಲ್ಲೆಗಳಲ್ಲಿ ಈ ಅಭಿಯಾನ ಹಮ್ಮಿಕೊಳ್ಳಲಾಗಿದೆ.

ಮತದಾರರು ಪಟ್ಟಿಯಲ್ಲಿ ಬಿಟ್ಟು ಹೋಗಿರುವ ವಿವರಗಳನ್ನು ಸರಿಪಡಿಸಲು ಹಾಗೂ ಹೊಸ ಹೆಸರುಗಳ ನೊಂದಣಿಗೆ ಜನವರಿ 15 ಕಡೆಯ ದಿನ, ಫೆಬ್ರವರಿ 7 ರಂದು ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸಲಾಗುವುದು.

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ…

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.