ಕೆ.ಎನ್.ಪಿ.ವಾರ್ತೆ,ಧಾರವಾಡ,ಜು.07;

ಕರ್ನಾಟಕ ಹಾಲು ಮಹಾ ಮಂಡಳಿಯು ಜುಲೈ 6 ರಿಂದ ಜುಲೈ 20 ರವರೆಗೆ ಒಟ್ಟು 15 ದಿನಗಳ ಕಾಲ ನಂದಿನಿ ಸಿಹಿ ಉತ್ಸವ ಆಚರಿಸುತ್ತಿದ್ದು, ಸಿಹಿ ತಿನಿಸುಗಳನ್ನು ಶೇ.10 ರಿಯಾಯಿತಿ ದರದಲ್ಲಿ ಗ್ರಾಹಕರಿಗೆ ನೀಡಲಿದೆ.

ಕರ್ನಾಟಕ ಹಾಲು ಮಹಾ ಮಂಡಳಿಯು ನಂದಿನಿಯ ವಿವಿಧ ಹೊಸ ಉತ್ಪನ್ನಗಳನ್ನು ಗ್ರಾಹಕರಿಗೆ ಪರಿಚಯಿಸಿದ್ದು, ಒಕ್ಕೂಟದ ವ್ಯಾಪ್ತಿಯಲ್ಲಿ ಬರುವ ಧಾರವಾಡ, ಹಾವೇರಿ, ಗದಗ ಮತ್ತು ಉತ್ತರಕನ್ನಡ ಜಿಲ್ಲೆಗಳ ಗ್ರಾಹಕರಲ್ಲಿ ನಂದಿನಿ ಸಿಹಿ ಉತ್ಪನ್ನಗಳ ಕುರಿತು ಅರಿವು ಮೂಡಿಸುವ ಸಲುವಾಗಿ ಜುಲೈ 6 ರಿಂದ ನಂದಿನಿ ಸಿಹಿ ಉತ್ಸವ ಆರಂಭಿಸಿದೆ. ಜುಲೈ 20 ರವರೆಗೆ ಈ ಕಾರ್ಯಕ್ರಮ ಮುಂದುವರೆಯಲಿದೆ.

ಈ ಅವಧಿಯಲ್ಲಿ ನಂದಿನಿಯ ಎಲ್ಲಾ ಸಿಹಿ ಉತ್ಪನ್ನಗಳ ಗರಿಷ್ಠ ಮಾರಾಟ ದರದಲ್ಲಿ ಗ್ರಾಹಕರಿಗೆ ಶೇ.10 ರಷ್ಟು ರಿಯಾಯಿತಿ ದೊರೆಯುತ್ತದೆ. ನಂದಿನಿ ಡೀಲರ್‍ಗಳು, ದಿನವಿಡೀ ಹಾಲು ಮಾರಾಟ ಕೇಂದ್ರಗಳು, ಕೆ.ಎಸ್.ಆರ್.ಟಿ.ಸಿ, ಬಸ್ ನಿಲ್ದಾಣಗಳು, ರೇಲ್ವೆ ನಿಲ್ದಾಣ ಹಾಗೂ ಆಸ್ಪತ್ರೆ ಆವರಣದಲ್ಲಿ ಇರುವ ನಂದಿನಿ ಪಾರ್ಲರ್‍ಗಳೊಂದಿಗೆ ವಿವಿಧ ಮಳಿಗೆಯಲ್ಲಿ ಸಿಹಿ ಉತ್ಸವದ ವಿಶೇಷ ಪ್ರಚಾರ ಸಾಮಗ್ರಿಗಳನ್ನು ಅಳವಡಿಸಿ ಮಾಹಿತಿ ನೀಡಲಾಗುತ್ತಿದೆ ಎಂದು ಧಾರವಾಡ ಹಾಲು ಒಕ್ಕೂಟದ ವ್ಯವಸ್ಥಾಪಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವರದಿ : ಚಂದ್ರು ಹಿರೇಮಠ ಧಾರವಾಡ

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ… 

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.