ಕೆ.ಎನ್.ಪಿ.ವಾರ್ತೆ,ಬೆಂಗಳೂರು,ಡಿ.07;

ಕೌಟುಂಬಿಕ ಕಲಹದ ಹಿನ್ನೆಲೆ ರಾಜ್ಯ ಮಹಿಳಾ ಆಯೋಗದಿಂದ ನಟ ದುನಿಯಾ ವಿಜಯ್ ಗೆ ನೋಟಿಸ್ ಜಾರಿಯಾಗಿದೆ.

ವಿಜಯ್ ಅವರ ಪತ್ನಿ ನಾಗರತ್ನಾ ಅವರು ಕಳೆದ ವಾರದಲ್ಲಿ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಭಾಯಿ ಅವರನ್ನು ಭೇಟಿ ಮಾಡಿ ತಮ್ಮ ನೋವು ತೋಡಿಕೊಂಡಿದ್ದರು.

ನನ್ನ ಕುಟುಂಬ ನಿರ್ವಹಣೆಗೆ ವಿಜಯ್ ಅವರಿಂದ ಸಿಗುತ್ತಿದ್ದ ಹಣ ಈಗ ನಿಂತಿದೆ. ನಾವಿರುವ ಮನೆ ಬಗ್ಗೆ ಕೂಡಾ ಸರಿಯಾದ ಖಾತ್ರಿಯಿಲ್ಲ. ನಾನು ನನ್ನ ಮಕ್ಕಳು ಕಣ್ಣೀರಿನಲ್ಲಿ ಕೈತೊಳಿಯುತ್ತಿದ್ದೇವೆ. ನಮಗೆ ಸೂಕ್ತ ನ್ಯಾಯ ಒದಗಿಸುವಂತೆ ಮನವಿ ಮಾಡಿಕೊಂಡಿದ್ದರು.

ನಾಗರತ್ನಾಳ ಮನವಿಯಂತೆ ಮಹಿಳಾ ಆಯೋಗವು ವಿಜಯ್ ಗೆ ನೋಟಿಸ್​ ನೀಡಿದ್ದು, ಇದಕ್ಕೆ ಪ್ರತಿಕ್ರಿಯಿಸಿರುವ ವಿಜಯ್ ಅವರು ಸದ್ಯದಲ್ಲೇ ಮಹಿಳಾ ಆಯೋಗದ ಕಚೇರಿಗೆ ಭೇಟಿ ನೀಡಿ ಉತ್ತರ ನೀಡುತ್ತೇನೆ, ಯಾರಿಗೂ ಅನ್ಯಾಯ ಮಾಡುವುದು ನನ್ನ ಉದ್ದೇಶವಲ್ಲ ಎಂದಿದ್ದಾರೆ.

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ… 

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.