ಕೆ.ಎನ್.ಪಿ.ವಾರ್ತೆ,ಮುಂಬೈ,ನ.27;

ಮಹಾರಾಷ್ಟ್ರದ 14ನೇ ವಿಧಾನಸಭೆಯ ವಿಶೇಷ ಅಧಿವೇಶನ ಬುಧವಾರ ಬೆಳಗ್ಗೆ ಆರಂಭವಾಗಿದ್ದು ನೂತನ ಚುನಾಯಿತ ಸದಸ್ಯರು ಶಾಸಕರಾಗಿ ಪ್ರಮಾಣವಚನ ಸ್ವೀಕರಿಸಿದರು.

ಹಂಗಾಮಿ ಸ್ಪೀಕರ್ ಕಾಳಿದಾಸ್ ಕೊಲಂಬ್ಕರ್ ನೂತನ ಶಾಸಕರಿಗೆ ಪ್ರತಿಜ್ಞಾವಿಧಿ ಬೋಧಿಸಿದರು. ಇಂದು ಬೆಳಗ್ಗೆ 8 ಗಂಟೆಗೆ ವಿಧಾನಸಭೆಗೆ ಆಗಮಿಸಿದ ಎಲ್ಲಾ 288 ಶಾಸಕರು ಪ್ರಮಾಣವಚನ ಸ್ವೀಕರಿಸಿದರು. 

ಉದ್ಧವ್ ಠಾಕ್ರೆ ನೂತನ ಮುಖ್ಯಮಂತ್ರಿಯಾಗಿ ಗುರುವಾರ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಅದಕ್ಕೂ ಮೊದಲು ವಿಧಾನಸಭೆಯಲ್ಲಿ ನೂತನ ಶಾಸಕರು ಪ್ರಮಾಣವಚನ ಸ್ವೀಕರಿಸಿದರು.

ನಿನ್ನೆ ಮಧ್ಯಾಹ್ನ ಬಿಜೆಪಿಯ ದೇವೇಂದ್ರ ಫಡ್ನವಿಸ್ ಮುಖ್ಯಮಂತ್ರಿ ಸ್ಥಾನಕ್ಕೆ ಮತ್ತು ಎನ್ ಸಿಪಿಯ ಅಜಿತ್ ಪವಾರ್ ಉಪ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದರು.

ಕೊಲಂಬ್ಕರ್ ಅವರನ್ನು ನಿನ್ನೆ ರಾಜ್ಯಪಾಲರು ಹಂಗಾಮಿ ಸ್ಪೀಕರ್ ಆಗಿ ನೇಮಿಸಿದ್ದರು. ರಾಜ್ಯದಲ್ಲಿ ಕಳೆದ ತಿಂಗಳು ಅಕ್ಟೋಬರ್ 24ರಂದು ವಿಧಾನಸಭೆ ಫಲಿತಾಂಶ ಪ್ರಕಟಗೊಂಡ ನಂತರ ಒಂದು ತಿಂಗಳ ಕಾಲ ನಡೆದ ಮಹಾಡ್ರಾಮಾದ ಬಳಿಕ ಶಿವಸೇನೆ, ಎನ್ ಸಿಪಿ ಮತ್ತು ಕಾಂಗ್ರೆಸ್ ನ ಮಹಾ ವಿಕಾಸ್ ಅಘಾಡಿ ಮೈತ್ರಿಕೂಟ ಸರ್ಕಾರ ರಚಿಸುತ್ತಿದ್ದು ನಾಳೆ ಉದ್ಧವ್ ಠಾಕ್ರೆ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ…

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.