ಕೆ.ಎನ್.ಪಿ.ವಾರ್ತೆ,ಹಾವೇರಿ,ಅ.24;

ಕಳೆದ ಎರಡ್ಮೂರು ದಿನಗಳಿಂದ ಸತತವಾಗಿ ಸುರಿಯುತ್ತಿರುವ ಮಳೆಯಿಂದಾಗಿ ತಾಲೂಕಿನ ನೆಗಳೂರ ಗ್ರಾಮದ ಬಹುತೇಕ ಹೊಲಗಳು ಸಂಪೂರ್ಣ ಜಲಾವೃತಗೊಂಡು ಬೆಳೆದ ಬೆಳೆಗಳಾದ ಶೇಂಗಾ, ಈರುಳ್ಳಿ, ಮೆಕ್ಕೆಜೋಳ ನೀರು ಪಾಲಾಗಿವೆ.

ಗ್ರಾಮದ ಶಿವನಗೌಡ ಬಿಷ್ಟನಗೌಡ್ರ ತಮ್ಮ ಮೂರು ಎಕರೆ ಜಮೀನನಲ್ಲಿ ಶೇಂಗಾ ಬೆಳೆದಿದ್ದು ಇನ್ನೇನು ಕಟಾವು ಮಾಡಲು ಮುಂದಾಗಬೇಕೆನ್ನುವಷ್ಟರಲ್ಲಿ ಬುಧವಾರ ಸುರಿದ ಮಳೆಯಿಂದಾಗಿ ಶೇಂಗಾ ಬೆಳೆ ಸಂಪೂರ್ಣ ನೀರು ಪಾಲಾಗಿದೆ. ಇನ್ನೇನು ಬರುವಷ್ಟು ಬರಲಿ ಎಂದು ಜಲಾವೃತಗೊಂಡ ಜಮೀನಲ್ಲಿಯೇ ಶೇಂಗಾ ಬೆಳೆ ಕಟಾವಿಗೆ ಮುಂದಾಗಿದ್ದಾರೆ.

ಈ ಸಂದರ್ಭದಲ್ಲಿ ಮಾತನಾಡಿದ ರೈತರು ಹಿಂದೆದೂ ಈ ತರಹದ ಮಳೆಯನ್ನೇ ನಾವು ನೋಡಿರಲಿಲ್ಲ. ಈ ಮಳೆಯಿಂದಾಗಿ ರೈತರು ತಾವು ಬೆಳೆದ ಬೆಳೆಗಳನ್ನು ಪಡೆಯುವುದಕ್ಕೂ ಆಗದೆ ಇತ್ತ ಬಿತ್ತನೆಗಾಗಿ ಮಾಡಿದ ಸಾಲ ತೀರಿಸುವುದಕ್ಕಾಗದೇ ಪರದಾಡುತ್ತಿದ್ದಾರೆ. ರಾಜ್ಯದಲ್ಲಿ ಇಂತಹ ಪರಿಸ್ಥಿತಿಯಲ್ಲಿ ಸರ್ಕಾರ ಬಹುಬೇಗನೆ ಬೆಳೆವಿಮೆ, ಬೆಳೆಹಾನಿ ಪರಿಹಾರ ನೀಡಿ ರೈತರ ಬದುಕಿಗೆ ದಾರಿದೀಪವಾಗಲಿ ಎಂದು ಆಗ್ರಹಿಸಿದರು.

ವರದಿ : ಗುರುಶಾಂತಸ್ವಾಮಿ ಹಿರೇಮಠ 

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ… 

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.