ಕೆ.ಎನ್.ಪಿ.ವಾರ್ತೆ,ನವದೆಹಲಿ,ಡಿ.09;

ದೇಶಾದ್ಯಂತ ಸಂಚಲನ ಸೃಷ್ಟಿಸಿದ “ನಿರ್ಭಯ” ಅತ್ಯಾಚಾರ ಪ್ರಕರಣದ ಅಪರಾಧಿಗಳಿಗೆ ಮರಣದಂಡನೆ ವಿಧಿಸುವ ದಿನ ನಿಗದಿಯಾಗಿದೆ. ಡಿ.೧೬ರ ಸೋಮವಾರ ಮುಂಜಾನೆ ೫ ಗಂಟೆಗೆ ನಾಲ್ವರು ಅಪರಾಧಿಗಳನ್ನು ಗಲ್ಲಿಗೇರಿಸಲಾಗುವುದು ಎಂದು ತಿಹಾರ್ ಜೈಲು ಅಧಿಕಾರಿಗಳು ತಿಳಿಸಿದ್ದಾರೆ.

ಈ ಸಂಬಂಧ ಸೋಮವಾರ ಕೇಂದ್ರ ಸರ್ಕಾರದಿಂದ ಆದೇಶಗಳು ತಲುಪಿವೆ ಎಂದು ಜೈಲಿನ ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಸ್ತುತ ಅಪರಾಧಿಗಳನ್ನು ಇರಿಸಿರುವ ತಿಹಾರ್ ಜೈಲಿನಲ್ಲಿ ಅವರನ್ನು ಗಲ್ಲಿಗೇರಿಸಲಾಗುವುದು. ಜೈಲು ಅಧಿಕಾರಿಗಳು ಇದಕ್ಕಾಗಿ ಸೂಕ್ತ ವ್ಯವಸ್ಥೆ ಮಾಡಿದ್ದಾರೆ ಎಂದು ತಿಳಿದುಬಂದಿದೆ.

ಅಪರಾಧಿಗಳ ಪೈಕಿ ಒಬ್ಬನಾಗಿರುವ ವಿನಯ್ ಶರ್ಮಾ ರಾಷ್ಟ್ರಪತಿಗೆ ಕ್ಷಮಾಧಾನ ಕೋರಿ ಆರ್ಜಿ ಸಲ್ಲಿಸಿದ್ದ, ಆದರೆ, ರಾಷ್ಟ್ರಪತಿ ರಾಮನಾಥ್ ಕೋವಿಂದ್ ಆರ್ಜಿಯನ್ನು ತಿರಸ್ಕರಿಸುವ ಮೂಲಕ ಶಿಕ್ಷೆ ಜಾರಿಗೆ ಹಸಿರು ನಿಶಾನೆ ತೋರಿಸಿದ್ದರು.

ಡಿಸೆಂಬರ್ ೧೬, ೨೦೧೨ ರಂದು, ದೆಹಲಿಯಲ್ಲಿ ಆರು ಮಂದಿ ಸೇರಿ ನಿರ್ಭಯಾ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ್ದರು. ಈ ಪೈಕಿ ನಾಲ್ವರಿಗೆ ಡಿಸೆಂಬರ್ ೧೬ ರಂದು ಗಲ್ಲಿಗೇರಿಸಲಿರುವುದು ವಿಶೇಷವಾಗಿದೆ. ಅಪರಾಧಿಗಳಲ್ಲಿ ಓರ್ವ ಬಾಲಾಪರಾಧಿಯಾಗಿದ್ದು, ಮತ್ತೊಬ್ಬ ಅಪರಾಧಿ ರಾಮ್‌ಸಿಂಗ್ ಜೈಲಿನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದ.

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ…

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.