ಕೆ.ಎನ್.ಪಿ.ವಾರ್ತೆ,ಧಾರವಾಡ,ಮಾ.19;

ಕಾಂಗ್ರೆಸ್ ಮಾಜಿ ಸಚಿವ ವಿನಯ್ ಕುಲಕರ್ಣಿ ಅವರ ಸಂಬಂಧಿಕರಿಗೆ ಸೇರಿದ ನಿರ್ಮಾಣದ ಹಂತದ ಮೂರು ಅಂತಸ್ತಿನ ಕಟ್ಟಡ ಕುಸಿದು ಬಿದ್ದಿದ್ದು, ಪರಿಣಾಮವಾಗಿ ಇಬ್ಬರು ಸಾವನ್ನಪ್ಪಿದ್ದು, 50ಕ್ಕೂ ಹೆಚ್ಚು ಜನರು ಅವಶೇಷದಡಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ.

ಧಾರವಾಡದ ಕುಮಾರೇಶ್ವರ ನಗರದಲ್ಲಿ ಈ ಅವಘಡ ಸಂಭವಿಸಿದೆ. ಇನ್ನು ಅವಶೇಷಗಳಡಿ ಸಿಲುಕಿರುವವರಿಗಾಗಿ ರಕ್ಷಣಾ ಕಾರ್ಯ ಭರದಿಂದ ಸಾಗಿದೆ.

ಘಟನಾ ಸ್ಥಳಕ್ಕೆ ಅಗ್ನಿಶಾಮಕ ವಾಹನಗಳು ಹಾಗೂ ಪೊಲೀಸರು ಸ್ಥಳಕ್ಕಾಗಮಿಸಿ ಸ್ಥಳೀಯರ ನೆರವಿನೊಂದಿಗೆ ರಕ್ಷಣಾ ಕಾರ್ಯದಲ್ಲಿ ತೊಡಗಿದ್ದಾರೆ. ಕಳಪೆ ಕಾಮಗಾರಿ ಹಿನ್ನೆಲೆಯಲ್ಲಿ ಈ ಕಟ್ಟದ ಕುಸಿದಿದೆ ಎಂದು ಹೇಳಲಾಗುತ್ತಿದೆ.

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ… 

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.