ಕರ್ನಾಟಕದಲ್ಲಿ ಮಳೆ ಮುನ್ಸೂಚನೆ : ಹಿಂದೂ ಮಹಾಸಾಗರದಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದಾಗಿ ಕರ್ನಾಟಕದಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಲಾಗಿದೆ.

ನವೆಂಬರ್ 8ರ ಬಳಿಕ ಕರ್ನಾಟಕದ ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

ನವೆಂಬರ್ 8ರ ಬಳಿಕ ರಾಜ್ಯದಲ್ಲಿ ಭಾರಿ ಮಳೆಯಾಗಲಿದೆ

ಕಳೆದ ನಾಲ್ಕು ದಿನಗಳಿಂದ ಮಳೆ ಕಡಿಮೆಯಾಗಿದ್ದು, ಬಿಸಿಲು ಇದೆ. ವಾಯುಭಾರ ಕುಸಿತ ಚಂಡಮಾರುತವಾಗಿ ರೂಪಗೊಳ್ಳುವ ಸಾಧ್ಯತೆ ಇದೆ.

ಇದರಿಂದಾಗಿ ಬೆಂಗಳೂರು, ತುಮಕೂರು, ಮಂಡ್ಯ, ಹಾಸನ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಮುನ್ಸೂಚನೆಯಲ್ಲಿ ತಿಳಿಸಲಾಗಿದೆ. 

ಉತ್ತರ ಒಳನಾಡು ಹಾಗೂ ಕರಾವಳಿ ಭಾಗದಲ್ಲಿ ಮಳೆ ಪ್ರಮಾಣ ಕಡಿಮೆಯಾಗಿದೆ. ನವೆಂಬರ್ 8ರ ತನಕ ಮಳೆಯಾಗುವುದಿಲ್ಲ ಎಂದು ಹವಾಮಾನ ಇಲಾಖೆ ಹೇಳಿದೆ. ಕರ್ನಾಟಕದಲ್ಲಿ ಭಾರಿ ಮಳೆಯ ಮುನ್ಸೂಚನೆ ಬಂದಿರುವುದು ಜನರಲ್ಲಿ ಮತ್ತೆ ಪ್ರವಾಹ ಭೀತಿ ಹುಟ್ಟಿಸಿದೆ.

ನವೆಂಬರ್ 8ರ ಬಳಿಕ ಕರ್ನಾಟಕದಲ್ಲಿ ಮತ್ತೆ ಭಾರಿ ಮಳೆ ಮುನ್ಸೂಚನೆ

ಕರ್ನಾಟಕದಲ್ಲಿ ಮುಂಗಾರು ಋತುವಿನಲ್ಲಿ ಭಾರಿ ಮಳೆಯಾಗಿತ್ತು. ಚಂಡಮಾರುತದ ಪ್ರಭಾವದಿಂದ ಅಕ್ಟೋಬರ್ ಅಂತ್ಯದ ತನಕವೂ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗಿದೆ. ಈಗ ನವೆಂಬರ್ ಬಂದರೂ ಮಳೆ ಬೀಳುತ್ತಿರುವುದು ರೈತರ ಆತಂಕಕ್ಕೆ ಕಾರಣವಾಗಿದೆ. 

ಈ ಹಿಂದೆ ಕ್ಯಾರ್ ನಿಂದ ಕರ್ನಾಟಕದಲ್ಲಿ ಮಳೆಯಾಗಿ ಜನ ಇನ್ನೂ ಚೇತರಿಸಿಕೊಂಡಿಲ್ಲ.  ಅಷ್ಟರಲ್ಲಿ ಮತ್ತೆ ವರುಣ ಮುನಿಸಿಕೊಂಡಿದ್ದಾನೆ. ವರುಣ ಆರ್ಭಟಕ್ಕೆ ಉತ್ತರ ಅಕ್ಷರಶಃ ತತ್ತರಿಸಿದೆ. ಬೆಳಗಾವಿ, ಬಾಗಲಕೋಟೆ, ಹಾವೇರಿ, ಗದಗ ಸೇರಿದಂತೆ ಉತ್ತರದ ಹಲವು ಜಿಲ್ಲೆಗಳು ಭಾಗಶಃ ಜಲಾವೃತಗೊಂಡಿದ್ದವು. ಮಹಮ್ಮಾರಿ ಮಳೆಗೆ ಬದುಕು ಕಳೆದುಕೊಂಡವರು ಇನ್ನೂ ಚೇತರಿಸಿಕೊಂಡಿಲ್ಲ.  ಮತ್ತೆ ಅಂತಹದ್ದೇ ಮಳೆ ಬರುವ ಮುನ್ಸೂಚನೆ ಬಂದಿರುವುದು ಜನರಲ್ಲಿ ಭಯ  ಮನೆಮಾಡಿದೆ. 

ನವೆಂಬರ್ 8ರ ಬಳಿಕ ರಾಜ್ಯದಲ್ಲಿ ಭಾರಿ ಮಳೆಯಾಗಲಿದೆ

ಮಹಾ ಮಳೆಗೆ ಮನೆಮಠ ಕಳೆದುಕೊಂಡವರಿಗೆ ಸರ್ಕಾರ ಪುನರ್ವಸತಿ ಕಲ್ಪಿಸುವ ಪ್ರಯತ್ನ ನಡೆಸಿದೆ. ಕೇಂದ್ರದಿಂದ ಸಕಾಲಕ್ಕೆ ಸೂಕ್ತ ಪ್ರಮಾಣದಲ್ಲಿ ನೆರೆ ಪರಿಹಾರ ಹಣ ಬಾರದಿರುವುದು ಪುನರ್ವಸತಿ ಕಾರ್ಯಕ್ಕೆ ತೀರ್ವ ಹಿನ್ನಡೆಯಾಗಿದೆ. ನೆರೆ ಹಾವಳಿಯಿಂದಾಗಿ ಜನ ಜೀವನ ಕಳೆದುಕೊಂಡು ಬೀದಿಪಾಲಾಗಿರುವ ಹೊತ್ತಲ್ಲಿ ರಾಜಕೀಯ ಪಕ್ಷಗಳು ಚುನಾವಣೆ ಮಾತುಡುತ್ತಿವೆ. ಇದು ಜನರ ಆಕ್ರೋಶಕ್ಕೆ ಕಾರಣವಾಗಿದೆ. 

ನವೆಂಬರ್ 8ರ ಬಳಿಕ ಕರ್ನಾಟಕದಲ್ಲಿ ಮತ್ತೆ ಭಾರಿ ಮಳೆಯ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿರುವುದು  ರೈತರ,  ಜನರರಲ್ಲಿ ಆತಂಕಕ್ಕೆ ಕಾರಣವಾಗಿದೆ. ರೈತರ ಸಂಕಷ್ಟಗಳನ್ನು ಆಲಿಸದ ಜನಪ್ರನಿಧಿಗಳ ನಡುವೆ ಪ್ರಕೃತಿ ಪದೇ ಪದೇ ಮುನಿಸಿಕೊಳ್ಳುತ್ತಿರುವುದು.  ಸಾಮಾನ್ಯರಲ್ಲಿ ಭವಿಷ್ಯದ ಬಗ್ಗೆ ಚಿಂತಿಸುವಂತಾಗಿದೆ. ಇನ್ನಾದರೂ ನಾಯಕರುಗಳು ರಾಜಕೀಯದ ಮೇಲಾಟಗಳನ್ನು ಬಿಟ್ಟು ಜನರ, ರೈತರ ಸಂಕಷ್ಟಗಳಿಗೆ ಸ್ಪಂದಿಸಲಿ ಎನ್ನುವುದೇ ಕನ್ನಡಿಗರ ಅಳಲು.

ವರದಿ : ಸುಲೇಮಾನ್ 

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ…

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಕರ್ನಾಟಕದಲ್ಲಿಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.