ಕೆ.ಎನ್.ಪಿ.ವಾರ್ತೆ,ಗಂಗಾವತಿ,ನ.11;

ನಗರದ ಶ್ರೀ ಕೊಲ್ಲಿ ನಾಗೇಶ್ವರರಾವ್ ಗಂಗಯ್ಯ ಸರಕಾರಿ ಪ್ರಥಮ ದರ್ಜೆ ಕಾಲೇಜು ಸಭಾಂಗಣದಲ್ಲಿ ನಾಳೆ ಬೆಳಿಗ್ಗೆ 10ಗಂಟೆಗೆ “ನನ್ನ ನೆಚ್ಚಿನ ಪುಸ್ತಕ” ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.

ಕನ್ನಡ ಪುಸ್ತಕ ಪ್ರಾಧಿಕಾರ ಬೆಂಗಳೂರು ಸಹಯೋಗದೊಂದಿಗೆ ಕನ್ನಡ ವಿಭಾಗ, ಶ್ರೀ ಕೊಲ್ಲಿ ನಾಗೇಶ್ವರರಾವ್ ಗಂಗಯ್ಯ ಸರಕಾರಿ ಪ್ರಥಮ ದರ್ಜೆ ಕಾಲೇಜು ಕನ್ನಡ ಜಾಣ ಜಾಣೆಯರ ಬಳಗದಿಂದ ಕಾಲೇಜು ಸಭಾಂಗಣದಲ್ಲಿ ನಾಳೆ ಬೆಳಿಗ್ಗೆ 10ಗಂಟೆಗೆ “ನನ್ನ ನೆಚ್ಚಿನ ಪುಸ್ತಕ” ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.

ಪುಸ್ತಕ ಪ್ರಾಧಿಕಾರದ ಸದಸ್ಯರಾದ ಅಶೋಕ ರಾಯ್ಕರ್ ಕಾರ್ಯಕ್ರಮ ಉದ್ಘಾಟಿಸುವರು. ಗಂಗಾವತಿ ಎಸ್.ಕೆ.ಎನ್.ಜಿ ಕಾಲೇಜಿನ ಪ್ರಾಂಶುಪಾಲರಾದ ಡಾ.ನಾರಾಯಣ ಜಿ ಹೆಬಸೂರ ಅಧ್ಯಕ್ಷತೆ ವಹಿಸುವರು. 

ಕನ್ನಡ ಜಾಣ ಜಾಣೆಯರ ಬಳಗದ ಸಂಯೋಜಕರಾದ ಡಾ. ನಿಂಗಪ್ಪ ಕಂಬಳಿ ಆಶಯ ನುಡಿಗಳನ್ನಾಡುವರು. ನಿವೃತ್ತ ಕೆ.ಎ.ಎಸ್.ಅಧಿಕಾರಿಗಳು ಹಾಗೂ ಹಿರಿಯ ಸಾಹಿತಿಗಳಾದ ಎ.ಎಂ.ಮದರಿ “ಪುಸ್ತಕ ಸಂಸ್ಕೃತಿ” ಕುರಿತು ವಿಶೇಷ ಉಪನ್ಯಾಸ ನೀಡುವರು.

ಕನ್ನಡ ವಿಭಾಗದ ಮುಖ್ಯಸ್ಥರಾದ ಶ್ರೀಮತಿ ಜಗದೇವಿ ಕಲಶೆಟ್ಟಿ, ಸ್ನಾತಕೋತ್ತರ ಕನ್ನಡ ವಿಭಾಗದ ಸಂಯೋಜಕರಾದ ಡಾ.ಜಾಜಿ ದೇವೇಂದ್ರಪ್ಪ, ಸಹಾಯಕ ಪ್ರಾಧ್ಯಾಪಕರಾದ ಡಾ.ಮುಮ್ತಾಜ್ ಬೇಗಂ ಗೌರವ ಉಪಸ್ಥಿತರಿರುವರು.

ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು, “ನನ್ನ ನೆಚ್ಚಿನ ಪುಸ್ತಕ” ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ, ಕನ್ನಡ ಜಾಣ ಜಾಣೆಯರ ಬಳಗದ ಸಂಯೋಜಕರಾದ ಡಾ. ನಿಂಗಪ್ಪ ಕಂಬಳಿ ಪ್ರಕಟಣೆಯಲ್ಲಿ ಕೋರಿದ್ದಾರೆ.

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ…

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.