ಕೆ.ಎನ್.ಪಿ.ವಾರ್ತೆ,ನವದೆಹಲಿ,ನ.13;

ಸರ್ವೋಚ್ಛ ನ್ಯಾಯಾಲಯದ ಮುಖ್ಯ ನ್ಯಾಯಾಧೀಶರ (ಸಿಜೆಐ) ಕಚೇರಿ ಸಹ ಮಾಹಿತಿ ಹಕ್ಕು ಕಾಯಿದೆ (ಆರ್ ಟಿಐ) ಅಡಿ ಬರುತ್ತದೆ ಎಂದು ಸುಪ್ರೀಂ ಕೋರ್ಟ್ ಬುಧವಾರ ಮತ್ತೊಂದು ಮಹತ್ವದ ತೀರ್ಪು ನೀಡಿದೆ.

2010ರಲ್ಲಿಯೇ ಸುಪ್ರೀಂಕೋರ್ಟ್ ಸಾರ್ವಜನಿಕ ಉತ್ತರದಾಯಿತ್ವ ಹೊಂದಿದ್ದು, ಸಿಜೆಐ ಕಚೇರಿ ಕೂಡಾ ಆರ್ ಟಿಐ ಕಾಯ್ದೆಯಡಿ ಬರಬೇಕಾಗಿದೆ ಎಂದು ದೆಹಲಿ ಹೈಕೋರ್ಟ್ ನೀಡಿದ್ದ ತೀರ್ಪನ್ನು ಸುಪ್ರೀಂ ಕೋರ್ಟ್ ಇಂದು ಎತ್ತಿ ಹಿಡಿದಿದೆ. ಆದರೆ ಕೆಲವು ಷರತ್ತುಗಳೊಂದಿಗೆ ಸಿಜೆಐ ಕಚೇರಿ ಆರ್ ಟಿಐ ವ್ಯಾಪ್ತಿಗೆ ಒಳಪಡುತ್ತದೆ ಎಂದು ಸುಪ್ರೀಂ ಕೋರ್ಟ್ ಸಾಂವಿಧಾನಿಕ ಪೀಠ ತೀರ್ಪು ನೀಡಿದೆ.

ಸಿಜೆಐ ಸಾರ್ವಜನಿಕ ಆಸ್ತಿಯಾಗಿದ್ದು, ಅವರ ಕಚೇರಿ ಆರ್ ಟಿಐ ಕಾಯ್ದೆ ವ್ಯಾಪ್ತಿಗೆ ಬರುತ್ತದೆ. ನ್ಯಾಯಾಂಗದ ಸ್ವಾತಂತ್ರ್ಯವು ನ್ಯಾಯಾಧೀಶರ ಖಾಸಗಿ ಹಕ್ಕು ಅಲ್ಲ. ಅದು ಅವರ ಮೇಲೆ ಸಂವಿಧಾನವು ಹೊರಿಸಿರುವ ಗುರುತರ ಜವಾಬ್ದಾರಿ ಎಂದು ದೆಹಲಿ ಹೈಕೋರ್ಟ್ ಹೇಳಿತ್ತು.

ದೆಹಲಿ ಹೈಕೋರ್ಟ್ ತೀರ್ಪು ನ್ಯಾಯಾಂಗ ಪ್ರಕ್ರಿಯೆ ಮೇಲೆ ಪರಿಣಾಮ ಬೀರಲಿದೆ ಎಂದು ಆಕ್ಷೇಪ ವ್ಯಕ್ತಪಡಿಸಿದ್ದ ಸುಪ್ರೀಂಕೋರ್ಟ್ ಪ್ರಧಾನ ಕಾರ್ಯದರ್ಶಿ, ತೀರ್ಪಿನ ವಿರುದ್ಧ ಮೇಲ್ಮನವಿ ಸಲ್ಲಿಸಿದ್ದರು.

ಕೇಂದ್ರ ಸರ್ಕಾರ ಅಕ್ಟೊಬರ್ 12, 2005ರಲ್ಲಿ ಮಾಹಿತಿ ಹಕ್ಕು ಕಾಯ್ದೆಯನ್ನು ಜಾರಿಗೆ ತಂದಿತು. ಸರ್ಕಾರಿ ಕಾರ್ಯಗಳಲ್ಲಿ ಪಾರದರ್ಶಕತೆ ತರುವುದು ಈ ಕಾಯಿದೆಯ ಮೂಲ ಉದ್ದೇಶ.

ದೇಶದ ಎಲ್ಲಾ ರಾಜ್ಯಗಳಲ್ಲಿ ಆರ್ ಟಿಐ ಕಾಯಿದೆ ಅನ್ವಯವಾಗುತ್ತದೆಯಾದರೂ ಜಮ್ಮು ಮತ್ತು ಕಾಶ್ಮೀರದಲ್ಲಿ ಆರ್ ಟಿಐ ಬಳಸಲು ಅವಕಾಶವಿರಲಿಲ್ಲ.

2017 ರಲ್ಲಿ ಆರ್ ಟಿಐ ಕಾರ್ಯಕರ್ತ ಸುಭಾಷ್ ಚಂದ್ರ ಅಗರವಾಲ್ ಅವರು ಸುಪ್ರೀಂ ಕೋರ್ಟ್ ನ್ಯಾಯಾಧೀಶರ ಆಸ್ತಿವಿವರದ ಮಾಹಿತಿ ನೀಡುವಂತೆ ಮಾಹಿತಿ ಹಕ್ಕು ಕಾಯ್ದೆಯಡಿ ಅರ್ಜಿ ಸಲ್ಲಿಸಿದ್ದರು.

ಆದರೆ ಸುಪ್ರೀಂ ಕೋರ್ಟ್ ಈ ಮಾಹಿತಿ ಹಂಚಿಕೊಳ್ಳಲು ನಿರಾಕರಿಸಿ, ಸಿಜೆಐ ಕಚೇರಿ ಮಾಹಿತಿ ಹಕ್ಕು ಕಾಯ್ದೆಯಡಿ ಬರುವುದಿಲ್ಲ ಎಂದು ಸ್ಪಷ್ಟಪಡಿಸಿತ್ತು.

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ…

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.