ಕೆ.ಎನ್.ಪಿ.ವಾರ್ತೆ,ಕಲಬುರಗಿ,ಜೂ.05;

ಪಲ್ಲಂಗದಾಟದ ವೇಳೆ ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದ ಇಬ್ಬರನ್ನು ಸಂಬಂಧಿಕರೇ ಬರ್ಬರವಾಗಿ ಕೊಚ್ಚಿ ಹತ್ಯೆಗೈದ ಘಟನೆ ಕಲಬುರಗಿಯಲ್ಲಿ ನಡೆದಿದೆ.

ಕಲಬುರಗಿ ತಾಲೂಕಿನ ಬೆಳಗುಂಪಾ ಗ್ರಾಮದ ಶಂಕರ್ ಮ್ಯಾಕೇರಿ (40) ಮತ್ತು ಮಡೆಮ್ಮ ಭೀಮಾಶಂಕರ ಮಾಂಗ (30) ಇಬ್ಬರು ಜೊತೆಯಲ್ಲಿರುವಾಗಲೇ ಸಂಬಂಧಿಕರ ಕೈಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ. ಈ ವೇಳೆ ಆಕ್ರೋಶಗೊಂಡ ಸಂಬಂಧಿಕರು ಅವರನ್ನು ಬರ್ಬರವಾಗಿ ಹತ್ಯೆ ಮಾಡಿದ್ದಾರೆ.

ಹಲವು ವರ್ಷಗಳಿಂದ ಇಬ್ಬರು ಅನೈತಿಕ ಸಂಬಂಧ ಹೊಂದಿದ್ದಾರೆ ಎಂದು ಹೇಳಲಾಗಿದೆ. ಇನ್ನು ಇಬ್ಬರೂ ವಿವಾಹಿತರಾಗಿದ್ದು ಇಬ್ಬರಿಗೂ ತಲಾ ಎರಡು ಮಕ್ಕಳಿವೆ. ಮಡೆಮ್ಮಳನ್ನು ಪತಿ ಬಿಟ್ಟು ಹೋಗಿದ್ದರಿಂದ ಆಕೆ ಬೆಳಗುಂಪಾದಲ್ಲೇ ಸಹೋದರ ಸಂಬಂಧಿಕರ ಜತೆ ವಾಸವಾಗಿದ್ದಳು. ಅದೇ ಗ್ರಾಮದ ಶಂಕರ ಮ್ಯಾಕೇರಿ ಪರಿಚಯವಾಗಿ ಪ್ರೇಮಕ್ಕೆ ತಿರುಗಿದೆ. ಇಬ್ಬರು ವಿವಾಹವಾಗಿದ್ದರಿಂದ ಅನೈತಿಕ ಸಂಬಂಧ ಇರಿಸಿಕೊಂಡಿದ್ದರು.

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ… 

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.