ಕೆ.ಎನ್.ಪಿ.ವಾರ್ತೆ,ಕಲಬುರಗಿ,ನ.06;

ಪತ್ನಿಯನ್ನು ಕೊಂದು, ಮೃತದೇಹವನ್ನು ಮೂರು ದಿನ ಮಂಚದ ಕೆಳಗೆ ಮುಚ್ಚಿಟ್ಟಿದ್ದ ಪಾಪಿ ಪತಿ ಬಂಧನ…

ಪತಿಯೊಬ್ಬ ತನ್ನ ಪತ್ನಿಯನ್ನು ಕೊಲೆಗೈದು ಮೃತದೇಹವನ್ನು ಮಂಚದ ಕೆಳಗೆ ಮೂರು ದಿನ ಮುಚ್ಚಿಟ್ಟಿದ್ದ ಅಮಾನವೀಯ ಘಟನೆ ಆಳಂದ ತಾಲೂಕಿನಲ್ಲಿ ನಡೆದಿದೆ.

ಆಳಂದ ತಾಲೂಕಿನ ಮಾದನಹಿಪ್ಪರಗಾ ಗ್ರಾಮದ ಸಂಗೀತಾ ಸಕ್ಕರಗಿ (35) ಕೊಲೆಯಾದ ಪತ್ನಿ. ಶ್ರೀಶೈಲ್ ಸಕ್ಕರಗಿ (45) ಕೊಲೆಗೈದ ಪಾಪಿ ಪತಿ. ಮಾದನಹಿಪ್ಪರಗಾ ಗ್ರಾಮದ ಮನೆಯಲ್ಲಿ ಶ್ರೀಶೈಲ್ ಶನಿವಾರ ಕೃತ್ಯ ಎಸಗಿದ್ದಾನೆ. ಶವ ಕೊಳೆತ ವಾಸನೆ ಬಂದಿದ್ದರಿಂದ ಪ್ರಕರಣ ಬೆಳಕಿಗೆ ಬಂದಿದೆ.

ಶ್ರೀಶೈಲ್ 15 ವರ್ಷಗಳ ಹಿಂದೆಯೇ ಸಂಗೀತಾಳನ್ನು ಮದುವೆಯಾಗಿದ್ದರು. ಮಾದನಹಿಪ್ಪರಗಾ ಗ್ರಾಮದಲ್ಲಿ ಇಬ್ಬರು ಕೂಲಿ ಮಾಡಿಕೊಂಡು ಸಂತೋಷವಾಗಿದ್ದರು. ಮದುವೆಯಾಗಿ 15 ವರ್ಷ ಕಳೆದರೂ ಮಕ್ಕಳಾಗಲಿಲ್ಲ ಎನ್ನುವ ಕೊರಗು ದಂಪತಿಗೆ ಇತ್ತು.

ಸಂಗೀತಾ ಮೂರು ದಿನಗಳಿಂದ ಕಾಣದೆ ಇರುವುದರಿಂದ ಶ್ರೀಶೈಲ್‌ನನ್ನು ಅಕ್ಕ ಪಕ್ಕದ ಮನೆಯವರು ವಿಚಾರಿಸಿದ್ದರು. ಜೊತೆಗೆ ಮನೆಯಿಂದ ಕೆಟ್ಟ ವಾಸನೆ ಬರುತ್ತಿದ್ದರಿಂದ ಅಕ್ಕಪಕ್ಕದವರು ಪೊಲೀಸರಿಗೆ ಮಾಹಿತಿ ನೀಡಿದ್ದರು.

ವಿಷಯ ತಿಳಿದು ಸ್ಥಳಕ್ಕೆ ಬಂದ ಪೊಲೀಸರು ಮನೆಯಲ್ಲಿ ಪರಿಶೀಲನೆ ನಡೆಸಿದಾಗ ಸಂಗೀತಾ ಮೃತದೇಹ ಪತ್ತೆಯಾಗಿದೆ. ಕೊಲೆಗೆ ಶ್ರೀಶೈಲನ ತಾಯಿ ಕುಮ್ಮಕ್ಕು ನೀಡಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.

ಈ ಸಂಬಂಧ ಮಾದನಹಿಪ್ಪರಗಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿ ಶ್ರೀಶೈಲ್‌ನನ್ನ ಬಂಧಿಸಿರುವ ಪೊಲೀಸರು ವಿಚಾರಣೆ ನಡೆಸಿದ್ದಾರೆ.

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ…

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.