ಕೆ.ಎನ್.ಪಿ.ವಾರ್ತೆ,ಉಡುಪಿ,ಡಿ.28;

ಪೇಜಾವರ ಶ್ರೀಗಳ ಆರೋಗ್ಯ ಸ್ಥಿತಿ ತೀರಾ ಗಂಭೀರವಾಗಿದ್ದು ಪ್ರಜ್ಞೆ ಸ್ಥಿತಿಯಲ್ಲಿ ಯಾವುದೇ ಸುಧಾರಣೆ ಕಂಡು ಬಂದಿಲ್ಲ ಎಂದು ಮಣಿಪಾಲ ಕಸ್ತೂರ್ಬಾ ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ.

ಶುಕ್ರವಾರ ರಾತ್ರಿ ಶ್ರೀಗಳಿಗೆ ಎಂಆರ್‌ಐ ಸ್ಕ್ಯಾನಿಂಗ್‌ ಮಾಡಲಾಗಿದೆ. ಅದರ ವರದಿ ಬಂದ ನಂತರ ಮುಂದಿನ ಚಿಕಿತ್ಸೆ ಬಗ್ಗೆ ನಿರ್ಧರಿಸಲಾಗುವುದು ಎಂದು ವೈದ್ಯರು ತಿಳಿಸಿದ್ದಾರೆ.

ಶನಿವಾರ ಬೆಳಗ್ಗೆ 10 ಗಂಟೆಗೆ ಮತ್ತೊಮ್ಮೆ ಹೆಲ್ತ್‌ ಬುಲೆಟಿನ್‌ ಬಿಡುಗಡೆ ಮಾಡಲಾಗುವುದು ಎಂದು ವೈದ್ಯರು ತಿಳಿಸಿದ್ದಾರೆ.

ಈ ನಡುವೆ ಶ್ರೀಗಳ ಆರೋಗ್ಯ ಪರಿಸ್ಥಿತಿ ಕುರಿತು ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ ಆಸ್ಪತ್ರೆ ವೈದ್ಯರಿಂದ ಸಂಪೂರ್ಣ ಮಾಹಿತಿ ಪಡೆದಿದ್ದಾರೆ.

ಬೆಂಗಳೂರಿನ ಮಣಿಪಾಲ ಆಸ್ಪತ್ರೆಯ ತಜ್ಞ ವೈದ್ಯರಿಬ್ಬರು ಸಲಹೆ ನೀಡುತ್ತಿದ್ದಾರೆ. ಮಣಿಪಾಲದ ತಜ್ಞ ವೈದ್ಯರ ತಂಡವು ದಿಲ್ಲಿಯ ಏಮ್ಸ್‌ ತಜ್ಞರ ಸಂಪರ್ಕದಲ್ಲಿದ್ದರೂ ಶುಕ್ರವಾರದಿಂದ ದೇಹ ಚೇತರಿಕೆ ಹಾಗೂ ಚಿಕಿತ್ಸೆಗೆ ಸ್ಪಂದನ ನಿಧಾನವಾಗಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ…

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.