ಕೆ.ಎನ್.ಪಿ.ವಾರ್ತೆ,ಬೆಳಗಾವಿ,ಮೇ.15;

ಪೆಟ್ರೋಲ್ ಬಂಕ್ ನಲ್ಲಿ ಕೆಲಸ ಮಾಡುತ್ತಿದ್ದ ಇಬ್ಬರು ಕಾರ್ಮಿಕರನ್ನು ಇಂದು ಬೆಳಿಗ್ಗೆ ಹತ್ಯೆ ಮಾಡಿರುವ ದಾರುಣ ಘಟನೆ ಬೆಳಗಾವಿ ಕಿತ್ತೂರಿನ ಶಿವ ಪೆಟ್ರೋಲ್ ಪಂಪ್ ನಲ್ಲಿ ನಡೆದಿದೆ.

ಪೊಲೀಸ್ ಅಧೀಕ್ಷಕ ಸುಧೀರ್ ಕುಮಾರ್ ರೆಡ್ಡಿ ಸುದ್ದಿಗಾರರೊಂದಿಗೆ ಮಾತನಾಡಿ, ಧಾರವಾಡ-ಕಿತ್ತೂರು ಹಾಗೂ ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿರುವ ಶಿವ ಪೆಟ್ರೋಲ್ ಪಂಪ್ ನಲ್ಲಿ ಆಗುಂತಕರು ಕಾರ್ಮಿಕರಿಬ್ಬರನ್ನು ಕೊಲೆಗೈದು ಹಣ ದೋಚಿ ಪರಾರಿಯಾಗಿದ್ದಾರೆ ಎಂದು ತಿಳಿಸಿದರು.

ಮೃತರನ್ನು ತಿಗಡೊಳ್ಳಿ ಗ್ರಾಮದ ಮುಶ್ತಾಕ್ ಬೀದಿ (30) ಹಾಗೂ ಲಿಂಗದಳ್ಳಿ ಗ್ರಾಮದ ಮಂಜುನಾಥ್ ಪಟ್ಟಣ್ ಶೆಟ್ಟಿ (28) ಎಂದು ಗುರುತಿಸಲಾಗಿದೆ. ಕಿತ್ತೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆಸಲಾಗಿದೆ ಎಂದು ಅವರು ತಿಳಿಸಿದರು.

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ… 

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.