ಕೆ.ಎನ್.ಪಿ.ವಾರ್ತೆ,ಭುವನೇಶ್ವರ,ಮೇ.03;

ಒಡಿಶಾ ಕಡಲ ತೀರಕ್ಕೆ ಗುರುವಾರ ಅಪ್ಪಳಿಸಿದ ಫೋನಿ ಚಂಡಮಾರುತ ಭಾರಿ ಅವಾಂತರ ಸೃಷ್ಟಿ ಮಾಡಿದ್ದು, ಚಂಡಮಾರುತದಿಂದಾಗಿ ಸೃಷ್ಟಿಯಾದ ವಿವಿಧ ಅವಘಡಗಳಲ್ಲಿ ಐವರು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.

ಪ್ರಧಾನಿ ನರೇಂದ್ರ ಮೋದಿ ಅವರು ಚಂಡಮಾರುತ ಪೀಡಿತ ರಾಜ್ಯಗಳಿಗೆ ತುರ್ತು ಪರಿಹಾರಕ್ಕಾಗಿ 1,000 ಕೋಟಿ ರೂಪಾಯಿ ಬಿಡುಗಡೆ ಮಾಡಿರುವುದಾಗಿ ಹೇಳಿದ್ದಾರೆ.

ಇಂದು ರಾಜಸ್ಥಾನದಲ್ಲಿ ಚುನಾವಣಾ ರ್ಯಾಲಿಯಲ್ಲಿ ಮಾತನಾಡಿದ ಪ್ರಧಾನಿ ಮೋದಿ, ಫೋನಿ ಚಂಡಮಾರುತಕ್ಕೆ ಸಂಬಧಿಸಿದಂತೆ ನಾನು ಕ್ಷಣ ಕ್ಷಣದ ಮಾಹಿತಿಯನ್ನು ಪಡೆಯುತ್ತಿದ್ದೇನೆ. ಕೇಂದ್ರ ಸರ್ಕಾರ ಎಲ್ಲಾ ರೀತಿಯ ನೆರವು ನೀಡಲಿದೆ ಎಂದು ತಿಳಿಸಿದ್ದಾರೆ.

ಇಂದು ಬೆಳಗ್ಗೆ ಪ್ರತಿ ಗಂಟೆಗೆ 200 ಕಿ. ಮೀ ವೇಗದಲ್ಲಿ ಪುರಿ ಕಡಲ ತೀರಕ್ಕೆ ಅಪ್ಪಳಿಸಿದ ಫೋನಿ ಚಂಡಮಾರುತ ಮಧ್ಯಾಹ್ನದವರೆಗೂ ಒಡಿಶಾ ಕರಾವಳಿ ತೀರದಲ್ಲಿ ಭಾರಿ ಬಿರುಗಾಳಿ ಸಹಿತ ಮಳೆಯನ್ನು ಸುರಿಸಿತು.

ಪ್ರಚಂಡ ಮಾರುತದ ಆರ್ಭಟಕ್ಕೆ ಅಸಂಖ್ಯಾತ ಮರಗಳು ಮತ್ತು ವಿದ್ಯುತ್ ಕಂಬಗಳು ಧರೆಗುರುಳಿದ್ದು, ಸಾವು-ನೋವು ಸಂಭವಿಸಿವೆ. ಅನೇಕ ಕಟ್ಟಡಗಳಿಗೂ ಹಾನಿಯಾಗಿದ್ದು, ವಿದ್ಯುತ್ ಸಂಪರ್ಕ ಕಡಿತಗೊಂಡಿದೆ. ಹಲವೆಡೆ ಭೂಕುಸಿತಗಳು ಸಂಭವಿಸಿವೆ.

ಇದೀಗ ಚಂಡಮಾರುತದ ಅಬ್ಬರ ಕೊಂಚ ತಗ್ಗಿದ್ದು, ಚಂಡಮಾರುತ ಪಶ್ಚಿಮ ಬಂಗಾಳದತ್ತ ಮುಖಮಾಡಿದೆ. ಕಡಲ ತೀರಕ್ಕೆ ಅಪ್ಪಳಿಸಿದ ಚಂಡಮಾರುತದ ವೇಗ ಬೆಳಿಗ್ಗೆ ಪ್ರತೀ ಗಂಟೆಗೆ 245 ಕಿ.ಮೀ ಇತ್ತು. ಇದೀಗ ಚಂಡಮಾರುತದ ವೇಗ ಕಡಿಮೆಯಾಗಿದ್ದು, ಪ್ರತೀ ಗಂಟೆಗೆ 150-160 ವೇಗದಲ್ಲಿ ಬೀಸುತ್ತಿದೆ ಎಂದು ಹವಾಮಾನ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಪಶ್ಚಿಮ ಬಂಗಾಳದ, ಆಂಧ್ರಪ್ರದೇಶದ ಕರಾವಳಿ ಜಿಲ್ಲೆಗಳಲ್ಲೂ ಚಂಡಮಾರುತದ ಪರಿಣಾಮ ಉಂಟಾಗಿದೆ. ಒಡಿಶಾದಲ್ಲಿ ಮಳೆ ಬಾಧಿತ ಪ್ರದೇಶಗಳಲ್ಲಿ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ಕಾರ್ಯಾಚರಣೆಯಲ್ಲಿ ತೊಡಗಿದೆ.

ಚಂಡಮಾರುತಕ್ಕೆ ಸಿಲುಕಿಕೊಂಡ ಜನರ ರಕ್ಷಣಾ ಮತ್ತು ಪರಿಹಾರ ಕಾರ್ಯಗಳಿಗಾಗಿ ಭಾರತೀಯ ಕರಾವಳಿ ಕಾವಲು ಪಡೆ ಹಾಗೂ ನೌಕಾಪಡೆಗಳು ಹಡಗು ಮತ್ತು ಹೆಲಿಕಾಪ್ಟರ್‌ಗಳನ್ನು ನಿಯೋಜಿಸಲಾಗಿದೆ.

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ… 

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.