ಕೆ.ಎನ್.ಪಿ.ವಾರ್ತೆ,ಬಳ್ಳಾರಿ,ಏ.25;
ಹರಪನಹಳ್ಳಿ ಪಿ.ಎಲ್.ಡಿ ಬ್ಯಾಂಕ್ ಅಧ್ಯಕ್ಷರಾಗಿ ಪಿ.ಎಲ್. ಪೋಮ್ಯನಾಯ್ಕ್ ಆಯ್ಕೆಯಾಗಿದ್ದಾರೆ.
ಇಂದು ನಡೆದ ಅಧ್ಯಕ್ಷರ ಚುನಾವಣೆಗೆ ಕಾಂಗ್ರೆಸ್ ಪಕ್ಷದಿಂದ ಪಿ.ಎಲ್. ಪೋಮ್ಯನಾಯ್ಕ್ ಮಾತ್ರ ನಾಮಪತ್ರ ಸಲ್ಲಿಸಿದ್ದ ಹಿನ್ನೆಲೆ ಪಿ.ಎಲ್.ಡಿ ಬ್ಯಾಂಕ್ ಅಧ್ಯಕ್ಷರಾಗಿ ಪಿ.ಎಲ್. ಪೋಮ್ಯನಾಯ್ಕ್ ಅವಿರೋಧವಾಗಿ ಆಯ್ಕೆಯಾದರು.
ಬೇರೆ ಪಕ್ಷಗಳು ಸ್ಪಷ್ಟ ಬಹುಮತ ಇಲ್ಲದಿರುವುದರಿಂದ ಬೇರೆ ಯಾವುದೇ ಪಕ್ಷದ ಅಭ್ಯರ್ಥಿ ನಾಮಪತ್ರ ಸಲ್ಲಿಸಿರಲಿಲ್ಲ. ಪಿ.ಎಲ್. ಪೋಮ್ಯನಾಯ್ಕ್, ಪಿ.ಎಲ್.ಡಿ ಬ್ಯಾಂಕ್ ಅಧ್ಯಕ್ಷ ರಾಗಿರುವುದು ಇದು 2ನೇ ಬಾರಿ.
ಈ ವೇಳೆ ಮಾತನಾಡಿದ ಪೋಮ್ಯನಾಯ್ಕ್, ಒಟ್ಟಾರೆ 12 ಜನ ಸದಸ್ಯರು ಇದ್ದು, ಅದರಲ್ಲಿ 10 ಜನ ಕಾಂಗ್ರೆಸ್ ಸದಸ್ಯರು ಮತ್ತು ಒಬ್ಬ ಬಿಜೆಪಿ ಸದಸ್ಯ ಸಹ ನನ್ನನ್ನೇ ಬೆಂಬಲಿಸಿದ್ದು, ನನ್ನನ್ನು ಅಧ್ಯಕ್ಷ ಸ್ಥಾನಕ್ಕೆ ಅವಿರೋಧವಾಗಿ ಆಯ್ಕೆ ಮಾಡಿದ್ದಾರೆ ಎಂದು ತಿಳಿಸಿದರು. ಈ ವೇಳೆ ಬ್ಯಾಂಕಿನ ಎಲ್ಲ ಸದಸ್ಯರು ಹಾಗೂ ಸಿಬ್ಬಂದಿಗಳು ಹಾಜರಿದ್ದರು.
ವರದಿ : ಬಸವರಾಜ್ ಪೂಜಾರ್