ಕೆ.ಎನ್.ಪಿ.ವಾರ್ತೆ,ಹಾವೇರಿ,ಡಿ.15;

ತಾಲೂಕಿನ ನೆಗಳೂರ ಗ್ರಾಮದ ಗುರುಶಾಂತೇಶ್ವರ ಸಂಸ್ಥಾನ ಹಿರೇಮಠದಲ್ಲಿ ಡಿ.24 ಮತ್ತು 25 ರಂದು ಜರುಗಲಿರುವ ಪಂಚಪೀಠಗಳಲ್ಲಿ ಒಂದಾದ ಕೇದಾರಪೀಠದ ಜಗದ್ಗುರುಗಳ ಅಡ್ಡಪಲ್ಲಕ್ಕಿ ಮಹೋತ್ಸವ ಹಾಗೂ ಸಂಗೀತಯುಕ್ತ ಇಷ್ಟಲಿಂಗ ಪೂಜೆ ಧರ್ಮ ಸಂರಕ್ಷಣೆಯ ಸಮಾರಂಭದ ಹಿನ್ನಲೆಯಲ್ಲಿ ಕಾರ್ಯಕ್ರಮದ ರೂಪರೇಷೆಗಳ ಬಗ್ಗೆ ಚರ್ಚಿಸುವುದರ ಸಲುವಾಗಿ ನಾಳೆ ಸಂಜೆ 7 ಗಂಟೆಗೆ ಮಠಾಧ್ಯಕ್ಷರಾದ ಗುರುಶಾಂತೇಶ್ವರ ಶಿವಾಚಾರ್ಯ ಸ್ವಾಮಿಗಳ ಸಾನ್ನಿಧ್ಯದಲ್ಲಿ ಶ್ರೀ ಮಠದಲ್ಲಿ ಪೂರ್ವಭಾವಿ ಸಭೆ ಕರೆಯಲಾಗಿದೆ.

ಆದ ಕಾರಣ ಶ್ರೀಮಠದ ಸದ್ಭಕ್ತರು, ಧರ್ಮಾಭಿಮಾನಿಗಳು ಗ್ರಾಮದ ಹಾಗೂ ಸುತ್ತಮುತ್ತಲಿನ ಗ್ರಾಮಸ್ಥರು ಪಾಲ್ಗೊಳ್ಳಬೇಕೆಂದು ಶ್ರೀ ಮಠದ ಪ್ರಕಟಣೆ ತಿಳಿಸಿದೆ.

ವರದಿ : ಗುರುಶಾಂತಸ್ವಾಮಿ ಹಿರೇಮಠ

ಧರ್ಮ ಪರಂಪರೆ ಸಂರಕ್ಷಣೆಯ ಸಂಸ್ಥಾನ

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ…

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.