ಕೆ.ಎನ್.ಪಿ.ವಾರ್ತೆ,ಬೆಂಗಳೂರು,ಜೂ.01;

ಪ್ರಗತಿಪರ ಚಿಂತಕ ಎಂ.ಎಂ.ಕಲ್ಬುರ್ಗಿ ಹತ್ಯೆ ಪ್ರಕರಣವನ್ನು ಭೇದಿಸುವಲ್ಲಿ ಎಸ್ಐಟಿ ತಂಡ ಮಹತ್ವದ ಘಟ್ಟಕ್ಕೆ ತಲುಪಿದ್ದು, ಹತ್ಯೆ ಪ್ರಕರಣದಲ್ಲಿ ಮತ್ತೊಬ್ಬ ಆರೋಪಿಯನ್ನು ಎಸ್‌ಐಟಿ ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದು ಬಂದಿದೆ.

ಹುಬ್ಬಳ್ಳಿಯಲ್ಲಿ ಪ್ರಮುಖ ಆರೋಪಿ ಕೃಷ್ಣಮೂರ್ತಿ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಆರೋಪಿ ಅಮೋಲ್‌ ಕಾಳೆಯನ್ನು 10 ದಿನಗಳ ವಶಕ್ಕೆ ಪಡೆದು ಈಗಾಗಲೇ ಕಲ್ಬುರ್ಗಿ ಹತ್ಯೆ ಪ್ರಕರಣದ ವಿಚಾರಣೆಯನ್ನು ಎಸ್‌ಐಟಿ ತೀವ್ರಗೊಳಿಸಿದ್ದು, ಈತನ ಹೇಳಿಕೆಯ ಮೇರೆಗೆ ಕೃಷ್ಣಮೂರ್ತಿಯನ್ನು ಎಸ್ಐಟಿ ಪೊಲೀಸರು ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ.

ಎಂ.ಎಂ.ಕಲ್ಬುರ್ಗಿ ಹತ್ಯೆ ಕೇಸ್ ನಲ್ಲಿ ಆರೋಪಿ ಕೃಷ್ಣಮೂರ್ತಿ ಬೈಕ್ ಓಡಿಸಿದ್ದು, ಗಣೇಶ್ ಮಸ್ಕಿನ್ ಗುಂಡು ಹಾರಿಸಿದ್ದಾಗಿ ದೃಢಪಟ್ಟಿದೆ. ಸಿಸಿಟಿವಿ ಕ್ಯಾಮೆರಾದಲ್ಲಿ ದೊರೆತ ದೃಶ್ಯಗಳಲ್ಲಿ ಕೃಷ್ಣಮೂರ್ತಿ ಹಾಗೂ ಗಣೇಶ್ ಮುಖ ಚಹರೆ ಹೊಂದಾಣಿಕೆ ಇದೆ. ಬಂಧನದ ಬಳಿಕ ಬೆಂಗಳೂರಿಗೆ ಕರೆತಂದಿರುವ ಎಸ್​ಐಟಿ ತಂಡ, ಬೆಂಗಳೂರಿನಲ್ಲಿ ರಹಸ್ಯ ಸ್ಥಳದಲ್ಲಿ ಆರೋಪಿ ಕೃಷ್ಣಮೂರ್ತಿಯನ್ನು ತೀವ್ರ ವಿಚಾರಣೆ ನಡೆಸುತ್ತಿದೆ.

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ… 

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.