ಕೆ.ಎನ್.ಪಿ.ವಾರ್ತೆ,ಗಂಗಾವತಿ,ಸೆ.07;

ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಭಾಗವಹಿಸಿ ತಾಲ್ಲೂಕು ಮಟ್ಟಕ್ಕೆ ಆಯ್ಕೆಯಾದ ಹೊಸ ಅಯೋದ್ಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ  ವಿದ್ಯಾರ್ಥಿಗಳಿಗೆ ಶಾಲಾ ಆಡಳಿತ ಮಂಡಳಿ, ಗ್ರಾಮಸ್ಥರು ಹಾಗೂ ಶಾಲಾ ಸಿಬ್ಬಂದಿಗಳು ಅಭಿನಂದನೆ ಸಲ್ಲಿಸಿದರು.

ಗಂಗಾವತಿ ಸಮೀಪದ ಚಿಕ್ಕಜಂತಕಲ್ ನಲ್ಲಿ ನಿನ್ನೆ ನಡೆದ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಭಾಗವಹಿಸಿದ್ದ ಹೊಸ ಅಯೋದ್ಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಿ ತಾಲೂಕು ಮಟ್ಟದಲ್ಲಿ ನಡೆಯುವ ಪ್ರತಿಭಾ ಕಾರಂಜಿ ಕಾರ್ಯಕ್ರಮಕ್ಕೆ ಆಯ್ಕೆಯಾಗಿದ್ದಾರೆ. 

ವೈಯಕ್ತಿಕ ಹಾಗೂ ಸಾಮೂಹಿಕ ಸ್ಪರ್ಧೆಗಳಲ್ಲಿ ಭಾಗವಹಿಸಿ ಕಿರಿಯ ಪ್ರಾಥಮಿಕ ವಿಭಾಗದ ಕನ್ನಡ ಇಂಗ್ಲಿಷ್ ಕಂಠಪಾಠ, ಕೋಲಾಟ ಮತ್ತು ಕವಾಲಿ ಹಾಗೂ ಹಿರಿಯ ವಿಭಾಗದ ಲಘು ಸಂಗೀತ, ಭಕ್ತಿಗೀತೆ, ಅರೇಬಿಕ್ ಧಾರ್ಮಿಕ ಪಠಣ, ಹಿಂದಿ ಕಂಠಪಾಠ, ಛದ್ಮವೇಷ, ಜಾನಪದ ನೃತ್ಯ ಕೋಲಾಟ ಸ್ಪರ್ಧೆಗಳಲ್ಲಿ ಒಟ್ಟು 11 ಪ್ರಥಮ ಸ್ಥಾನ ಪಡೆದು ತಾಲ್ಲೂಕು ಮಟ್ಟದ ಪ್ರತಿಭಾ ಕಾರಂಜಿಗೆ ಆಯ್ಕೆಯಾಗಿದ್ದಾರೆ.

ಪ್ರತಿಭಾ ಕಾರಂಜಿ ಕಾರ್ಯಕ್ರಮದಲ್ಲಿ ಪ್ರತಿಭೆಯನ್ನು ತೋರಿ ಉತ್ತಮ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಶಾಲಾ ಆಡಳಿತ ಮಂಡಳಿಯ ಟಿ.ರಾಧಾಕೃಷ್ಣ (ಎಸ್ಡಿಎಂಸಿ ಅಧ್ಯಕ್ಷರು) ದೇವರಾಜಗೌಡ (ಮಾಜಿ ಅಧ್ಯಕ್ಷರು ಹಾಲಿ ಎಸ್ಡಿಎಂಸಿ ಸದಸ್ಯರು) ಹಾಗೂ ಎಲ್ಲಾ ಎಸ್ಡಿಎಂಸಿ ಸದಸ್ಯರು, ಊರಿನ ಗ್ರಾಮಸ್ಥರು, ಶಿಕ್ಷಣ ಪ್ರೇಮಿಗಳು, ಚಿಕ್ಕಜಂತಕಲ್ ಗ್ರಾಮಪಂಚಾಯಿತಿಯ ಅಧ್ಯಕ್ಷರಾದ ಶ್ರೀಮತಿ ಹಂಪಮ್ಮ, ರೇಣುಕನಗೌಡ ಶುಭಕೋರಿ ಪ್ರಶಸ್ತಿ ವಿತರಣೆ ಮಾಡಿದರು.

ಬಳಿಕ ಎಸ್ಡಿಎಂಸಿ ಅಧ್ಯಕ್ಷರಾದ ರಾಧಾಕೃಷ್ಣ ಅವರು ಮಾತನಾಡಿ, ತಾಲ್ಲೂಕು ಮಟ್ಟಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಹೊಸ ವಿನ್ಯಾಸದ ವಸ್ತ್ರಗಳನ್ನು ಖರೀದಿಸಲು ಧನಸಹಾಯ ನೀಡುವುದಾಗಿ ಘೋಷಿಸಿದರು. ಹಾಗೂ ಎಲ್ಲ ಸದಸ್ಯರು ಮಕ್ಕಳ ಕಲಿಕೆಗೆ ಬೇಕಾದ ಸಹಕಾರ ನೀಡುವುದಾಗಿ ಆಶಾಭಾವನೆ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಮುಖ್ಯ ಶಿಕ್ಷಕರಾದ ಮಲ್ಲಿಕಾರ್ಜುನ ಸ್ವಾಮಿ ಅವರು ಮಾತನಾಡಿ, ಮಕ್ಕಳ ಕಲಿಕೆಗೆ ಸಾಮುದಾಯಿಕ ಸಹಕಾರ ಬಹಳ ಅಗತ್ಯ. ಅದರಂತೆ ನಮ್ಮ ಹೊಸ ಅಯೋಧ್ಯ ಗ್ರಾಮದ ಜನರು ಸಂಪೂರ್ಣ ಸಹಕಾರ ನೀಡುತ್ತಾ ಬಂದಿದ್ದಾರೆ. ಇದೇ ಸಹಕಾರ ಮುಂದೆಯೂ ಇರಲಿ ಎಂದರು.  ಹಾಗೂ ಪ್ರತಿಭಾ ಕಾರಂಜಿಯಲ್ಲಿ ಮಕ್ಕಳು ಭಾಗವಹಿಸಿ ಹೆಚ್ಚು ಹೆಚ್ಚು ಪ್ರಶಸ್ತಿಗಳನ್ನು ಪಡೆಯಲು ಶ್ರಮಿಸಿದ ಎಲ್ಲ ಶಿಕ್ಷಕರಿಗೂ ಧನ್ಯವಾದಗಳನ್ನು ತಿಳಿಸಿದರು. ಕಾರ್ಯಕ್ರಮದಲ್ಲಿ ಶಿಕ್ಷಕರಾದ ಮಂಜು ಎಂಟಿ, ಮಂಜುನಾಥ್ ಎಂ, ಕನಕರಾಯ ರಾಟಿ, ಶ್ರೀಮತಿ ಸುಭದ್ರ ಮತ್ತು ಶರಣಬಸವರಾಜ ಶಿಕ್ಷಕರು ಹಾಜರಿದ್ದರು.

ವರದಿ: ಹನುಮೇಶ ಭಾವಿಕಟ್ಟಿ

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ… 

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.