ಕೆ.ಎನ್.ಪಿ.ವಾರ್ತೆ,ಬೆಂಗಳೂರು,ಸೆ.09;

ಪ್ರವಾಹ ಸ್ಥಿತಿ ಬಗೆಗಿನ ಕೇಂದ್ರ ಹಾಗೂ ರಾಜ್ಯ ಸರ್ಕಾರದ ತಾತ್ಸಾರ, ನಿರ್ಲಕ್ಷ್ಯ ಹಾಗೂ ವೈಪಲ್ಯ ಖಂಡಿಸಿ ಸೆಪ್ಟೆಂಬರ್ 12ರಂದು ರಾಜ್ಯಾದ್ಯಂತ ಪ್ರತಿಭಟನೆ ನಡೆಸಲು ಕಾಂಗ್ರೆಸ್ ನಿರ್ಧರಿಸಿದೆ.

ಪ್ರವಾಹ ಪರಿಸ್ಥಿತಿ ಬಗೆಗಿನ ಕೇಂದ್ರ ಹಾಗೂ ರಾಜ್ಯ ಸರ್ಕಾರದ ತಾತ್ಸಾರ, ನಿರ್ಲಕ್ಷ್ಯ, ವೈಫಲ್ಯ ಖಂಡಿಸಿ ಹಾಗೂ ರಾಜ್ಯದ 25 ಮಂದಿ ಬಿಜೆಪಿ ಸಂಸದರ ದ್ರೋಹ ವಿರೋಧಿಸಿ ರಾಜ್ಯಾದ್ಯಂತ ಎಲ್ಲಾ ಜಿಲ್ಲಾ ಕೇಂದ್ರಗಳು ಹಾಗೂ 224 ವಿಧಾನಸಭಾ ಕ್ಷೇತ್ರಗಳಲ್ಲೂ ಸೆಪ್ಟೆಂಬರ್ 12 ರಂದು ಕಾಂಗ್ರೆಸ್ ಬೃಹತ್ ಪ್ರತಿಭಟನೆ ನಡೆಸಲಿದೆ ಎಂದು ಕರ್ನಾಟಕ ಕಾಂಗ್ರೆಸ್ ಟ್ವೀಟ್ ಮಾಡಿದೆ.

ಈ ಕುರಿತು ಮಾತನಾಡಿರುವ ದಿನೇಶ್ ಗುಂಡೂರಾವ್, ಭೀಕರ ಮಳೆಯಿಂದ ರಾಜ್ಯದಲ್ಲಿ ಮತ್ತೆ ಪ್ರವಾಸ ಸ್ಥಿತಿ ನಿರ್ಮಾಣವಾಗಿದೆ. ಆದರೆ, ಪ್ರವಾಸ ಸ್ಥಿತಿ ನಿಯಂತ್ರಿಸಲ ರಾಜ್ಯ ಸರಕಾರದ ಬಳಿ ಹಣವಿಲ್ಲ. ಸಂತ್ರಸ್ತರಿಗೆ ಪರಿಹಾರ ನೀಡುವಲ್ಲಿ ಸರಕಾರ ವಿಫಲವಾಗಿದೆ ಎಂದು ದೂರಿದರು.

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ… 

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.