ಕೆ.ಎನ್.ಪಿ.ವಾರ್ತೆ,ಬೆಂಗಳೂರು,ಆ.20;

ರಾಜ್ಯದಲ್ಲಿ ತಲೆದೋರಿರುವ ಪ್ರವಾಹ ಪರಿಸ್ಥಿತಿ ನಿರ್ವಹಿಸಲು ರಾಜ್ಯ ಸರ್ಕಾರ 195 ಕೋಟಿ ರೂ ಬಿಡುಗಡೆ ಮಾಡಿದೆ.

ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರ ಸೂಚನೆ ಅನುಸಾರ ಪರಿಹಾರ ಕಾರ್ಯಕೈಗೊಳ್ಳಲು, ನೆರೆ ಸಂತ್ರಸ್ತರಿಗೆ ಬಟ್ಟೆ, ಅಗತ್ಯ ವಸ್ತುಗಳನ್ನು ಒದಗಿಸುವುದು ಸೇರಿದಂತೆ ಪರಿಹಾರ ಕಾಮಗಾರಿ ಚುರುಕುಗೊಳಿಸಲು ಹಣ ಬಿಡುಗಡೆ ಮಾಡಲಾಗಿದೆ.

ಪ್ರವಾಹ ಸಂತ್ರಸ್ತ ತಾಲ್ಲೂಕುಗಳಲ್ಲಿ ಬಾಧಿತರಾದವರಿಗೆ ತಕ್ಷಣಕ್ಕೆ ಅಗತ್ಯ ವಸ್ತುಗಳ ಖರೀದಿಗಾಗಿ ಪ್ರತಿ ಕುಟುಂಬಕ್ಕೆ 10 ಸಾವಿರ ರೂ ನಂತೆ ವಿತರಿಸಲು, ರಾಜ್ಯ ವಿಪತ್ತು ನಿರ್ವಹಣಾ ನಿಧಿಯಡಿ ರಾಜ್ಯ ಸರ್ಕಾರದ ಹೆಚ್ಚುವರಿ ಪಾಲಿನ ಅನುದಾನದಿಂದ 80 ಕೋಟಿ ರೂ. ಅನುದಾನ ಮಂಜೂರು ಮಾಡಲಾಗಿದೆ.

ರಾಜ್ಯ ಸರ್ಕಾರ ನೆರೆ ಪರಿಸ್ಥಿತಿ ನಿರ್ವಹಣೆಗೆ 115 ಕೋಟಿ ರೂಪಾಯಿ ಬಿಡುಗಡೆ ಮಾಡಿದ್ದು, ಜತೆಗೆ ರಾಜ್ಯ ವಿಪತ್ತು ನಿರ್ವಹಣಾ ನಿಧಿಯಡಿ ರಾಜ್ಯ ಸರ್ಕಾರದ ಹೆಚ್ಚುವರಿ ಪಾಲಿನ ಅನುದಾನದಿಂದ 80 ಕೋಟಿ ರೂಪಾಯಿ ಮಂಜೂರು ಮಾಡಲಾಗಿದೆ.

ಆಯಾ ಜಿಲ್ಲೆಗಳಿಗೆ ತಲುಪಬೇಕಾದ ಹಣವನ್ನು ಜಿಲ್ಲಾಧಿಕಾರಿಗಳಿಗೆ ನೀಡಲಾಗಿದೆ. ಅಲ್ಲದೆ ಪ್ರವಾಹ ಸಂತ್ರಸ್ತ ತಾಲ್ಲೂಕುಗಳಲ್ಲಿ ಬಾಧಿತರಾದವರಿಗೆ ತಕ್ಷಣಕ್ಕೆ ಅಗತ್ಯ ವಸ್ತುಗಳ ಖರೀದಿಗಾಗಿ ಪ್ರತಿ ಕುಟುಂಬಕ್ಕೆ 10 ಸಾವಿರ ರೂ ನಂತೆ ವಿತರಿಸಲು ಸೂಚಿಸಲಾಗಿದೆ.

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ… 

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.