ಕೆ.ಎನ್.ಪಿ.ವಾರ್ತೆ,ಬೆಂಗಳೂರು,ಆ.09;

ಕರ್ನಾಟಕದಲ್ಲಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ. ಲಕ್ಷಾಂತರ ಜನರು ಮನೆ ಮಠ ಕಳೆದುಕೊಂಡು ಬೀದಿಗೆ ಬಂದಿದ್ದಾರೆ. ಅಲ್ಲದೆ ಪರಿಹಾರಕ್ಕಾಗಿ ಎದುರು ನೋಡುತ್ತಿದ್ದು ಇದಕ್ಕೆ ಸ್ಪಂಧಿಸಿರುವ ಸುಧಾಮೂರ್ತಿ ಅವರು ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ 10 ಕೋಟಿ ರುಪಾಯಿ ದೇಣಿಗೆ ನೀಡಿದ್ದಾರೆ.

ಇನ್ಫೋಸಿಸ್ ಫೌಂಡೇಶನ್ ಅಧ್ಯಕ್ಷೆ ಡಾ. ಸುಧಾ ಮೂರ್ತಿ ಅವರು ಸಿಎಂ ಪರಿಹಾರ ನಿಧಿಗೆ 10 ಕೋಟಿ ರುಪಾಯಿ ದೇಣಿಗೆ ನೀಡಿದ್ದಾರೆ ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರು ತಿಳಿಸಿದ್ದಾರೆ.

ಕುಂದಾನಗರಿ ಬೆಳಗಾವಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರವಾಹದಲ್ಲಿ ಮನೆ ಕಳೆದುಕೊಂಡವರಿಗೆ ಹೊಸ ಮನೆ ನಿರ್ಮಾಣ ಮಾಡಿಕೊಡಲಾಗುವುದು, ಆಸ್ತಿ ನಷ್ಟವಾದವರಿಗೂ ಪರಿಹಾರ ನೀಡಲಾಗುವುದು, ಪ್ರವಾಹದಲ್ಲಿ ಮೃತರಾದವರಿಗೆ ಐದು ಲಕ್ಷ ರೂಪಾಯಿ ಪರಿಹಾರ ನೀಡಲಾಗುವುದು ಎಂದು ಘೋಷಿಸಿದರು.

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ… 

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.