ಕೆ.ಎನ್.ಪಿ.ವಾರ್ತೆ,ಕೊಪ್ಪಳ,ಡಿ.01;

ವೈದ್ಯರ ನಿರ್ಲಕ್ಷ್ಯ ದಿಂದ ಗರ್ಭಿಣಿಯೊಬ್ಬರು ಮೃತಪಟ್ಟಿದ್ದಾರೆ ಎಂದು ಮೃತರ ಸಂಬಂಧಿಕರು ಆರೋಪಿಸಿದ್ದಾರೆ.

ಜ್ಯೋತಿಬಾಯಿ ನಾಯ್ಕ್ (27) ಮೃತ ಗರ್ಭಿಣಿ, ಕೊಪ್ಪಳ ಜಿಲ್ಲಾಸ್ಪತ್ರೆಯಲ್ಲಿ ಘಟನೆ ನಡೆದಿದೆ.

ಮೂಲತಃ ಬಳ್ಳಾರಿ ಜಿಲ್ಲೆ ಕೊಗಳಿತಾಂಡಾದವರಾದ ಜ್ಯೋತಿಬಾಯಿ ಗಿಣಿಗೇರ ಗ್ರಾಮದಲ್ಲಿ ವಾಸವಿದ್ದರು. ಬೆಳಗ್ಗೆ ಹೆರಿಗೆಗೆಂದು ಕೊಪ್ಪಳ ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದರು. ಆಕೆ ದಾಖಲಾದ ಒಂದು ಗಂಟೆ ಬಳಿಕ ವೈದ್ಯರು ಆಗಮಿಸಿದರು.

ವೈದ್ಯರು ಬರುವ ವೇಳೆಗೆ ಜ್ಯೋತಿಬಾಯಿ ಮೃತಪಟ್ಟಿದ್ದರು. ರಕ್ತದ ಕೊರತೆಯಿಂದ ಜ್ಯೋತಿ ಬಾಯಿ ಮೃತಪಟ್ಟಿದ್ದಾಳೆ ಎಂದು ವೈದ್ಯರು ತಿಳಿಸಿದ್ದಾರೆ. ರಕ್ತ ಪರೀಕ್ಷೆಯಲ್ಲಿ ಎಚ್ ಬಿ 11.6 ಎಂದು ಇದ್ದಿದ್ದನ್ನು ವೈದ್ಯರು 2.6 ಎಂದು ತಿದ್ದಿದ್ದಾರೆ ಎಂದು ಆರೋಪಿಸಿ ಮೃತರ ಕುಟುಂಬಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ…

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.