ಕೆ.ಎನ್.ಪಿ.ವಾರ್ತೆ,ನವದೆಹಲಿ,ನ.12;

ಮಹಾರಾಷ್ಟ್ರದಲ್ಲಿ ರಾಜಕೀಯ ಅರಾಜಕತೆ ಏರ್ಪಟ್ಟಿರುವ ಹಿನ್ನೆಲೆಯಲ್ಲಿ ರಾಷ್ಟ್ರಪತಿ ರಾಮನಾಥ ಕೋವಿಂದ ಅವರು ಬುಧವಾರ ಮಹಾರಾಷ್ಟ್ರದಲ್ಲಿ ಸಂವಿಧಾನದ 356ನೇ ವಿಧಿಯಡಿ ತುರ್ತು ಪರಿಸ್ಥಿತಿ ಜಾರಿ ಮಾಡಿದ್ದಾರೆ. ಈ ಮೂಲಕ ಮಹಾರಾಷ್ಟ್ರದಲ್ಲಿ ಮುಂದಿನ 6 ತಿಂಗಳುಗಳು ಕಾಲ ರಾಷ್ಟ್ರಪತಿ ಆಳ್ವಿಕೆ ಜಾರಿಯಲ್ಲಿ ಇರಲಿದೆ.

ಸರ್ಕಾರ ರಚಿಸುವಲ್ಲಿ ಬಿಜೆಪಿ, ಶಿವಸೇನಾ ವಿಫಲವಾದ ಬೆನ್ನಲ್ಲೇ, ರಾಜ್ಯದಲ್ಲಿ ರಾಷ್ಟ್ರಪತಿ ಆಡಳಿತ ಹೇರುವಂತೆ ಮಹಾರಾಷ್ಟ್ರ ರಾಜ್ಯಪಾಲ ಭಗತ್ ಸಿಂಗ್ ಕೊಶ್ಯಾರಿ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಿದ್ದರು.

ಈ ಹಿನ್ನೆಲೆಯಲ್ಲಿ ಇಂದು ತುರ್ತು ಸಚಿವ ಸಂಪುಟ ಸಭೆ ನಡೆಸಿದ ಪ್ರಧಾನಿ ನರೇಂದ್ರ ಮೋದಿ ಅವರು ಮಹಾರಾಷ್ಟ್ರದಲ್ಲಿ ರಾಷ್ಟ್ರಪತಿ ಆಡಳಿತ ಜಾರಿಗೊಳಿಸುವಂತೆ ರಾಷ್ಟ್ರಪತಿ ರಾಮನಾಥ್ ಕೊವಿಂದ್ ಅವರಿಗೆ ಶಿಫಾರಸು ಮಾಡಿದ್ದರು.

ಇದೀಗ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಶಿಫಾರಸಿಗೆ ಅಂಕಿತ ಹಾಕಿದ್ದು ಈ ಮೂಲಕ ಮಹಾರಾಷ್ಟ್ರದಲ್ಲಿ ರಾಷ್ಟ್ರಪತಿ ಆಡಳಿತ ಜಾರಿಗೆ ಬಂದಿದೆ.

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ…

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.