ಕೆ.ಎನ್.ಪಿ.ವಾರ್ತೆ,ಮುಂಬೈ,ಏ.09;

ಪ್ರೋ ಕಬಡ್ಡಿ ಲೀಗ್ (ಪಿಕೆಎಲ್)-7 ಜುಲೈ 19 ರಿಂದ ಆರಂಭವಾಗಲಿದ್ದು, ಅಕ್ಟೋಬರ್ 9 ರಂದು ಮುಕ್ತಾಯಗೊಳ್ಳಲಿದೆ.

ಏ.08 ರಂದು ಪಿಕೆಎಲ್ ನ 7 ನೇ ಸೀಸನ್ ವೇಳಾಪಟ್ಟಿ ಅಧಿಕೃತವಾಗಿ ಪ್ರಕಟಗೊಂಡಿದೆ. ಈ ಹಿಂದಿನ ಸೀಸನ್ ಹಬ್ಬಗಳ ಸಾಲಿನಲ್ಲಿ ಬಂದಿದ್ದರಿಂದ ವೀಕ್ಷಕರ ಸಂಖ್ಯೆ ಕಡಿಮೆಯಾಗಿತ್ತು.

ಈ ಹಿನ್ನೆಲೆಯಲ್ಲಿ ಈ ಬಾರಿ ಮತ್ತೆ ಜುಲೈ ನಲ್ಲೇ ಪಿಕೆಎಲ್-7 ಉದ್ಘಾಟನೆ ಮಾಡಲಾಗುತ್ತಿದೆ ಎಂದು ಆಯುಕ್ತ ಅನುಪಮ್ ಗೋಸ್ವಾಮಿ ಹೇಳಿದ್ದಾರೆ. 2018 ರಲ್ಲಿ ಅಕ್ಟೋಬರ್ ತಿಂಗಳಲ್ಲಿ ಪಿಕೆಎಲ್ ಆರಂಭವಾಗಿತ್ತು.

2020 ರಲ್ಲಿ ಆರಂಭವಾಗುವ ಮುಂದಿನ ಸೀಸನ್ ನ್ನು ಸಹ ಜುಲೈ ತಿಂಗಳಲ್ಲೇ ಪ್ರಾರಂಭಿಸಲಾಗುತ್ತದೆ ಎಂದು ಅನುಪಮ್ ಗೋಸ್ವಾಮಿ ತಿಳಿಸಿದ್ದಾರೆ. ಪಿಕೆಎಲ್ ಹರಾಜಿನಲ್ಲಿ ಭಾರತದಿಂದ 388 ಆಟಗಾರರಿದ್ದರೆ, 53 ವಿದೇಶಿ ಆಟಗಾರರಿದ್ದಾರೆ.

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ… 

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.