ಕೆ.ಎನ್.ಪಿ.ವಾರ್ತೆ,ಬೆಂಗಳೂರು,ಮಾ.23;
ದ್ವಿತೀಯ ಪಿಯು ಭೌತಶಾಸ್ತ್ರ ವಿಷಯದಲ್ಲಿ 6 ಮತ್ತು ಆಂಗ್ಲ ಭಾಷೆ ವಿಷಯದಲ್ಲಿ 3 ಅಂಕ ಒಟ್ಟಾರೆ 9 ಕೃಪಾಂಕ ನೀಡಲು ಪದವಿ ಪೂರ್ವ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.
ಈ ಕುರಿತು ಪ್ರತಿಕ್ರಿಯೆ ನೀಡಿದ ಇಲಾಖೆಯ ನಿರ್ದೇಶಕಿ ಸಿ. ಶಿಖಾ, ರಾಜ್ಯ ಪದವಿ ಪೂರ್ವ ಶಿಕ್ಷಣ ಇಲಾಖೆಯ ಪರೀಕ್ಷಾ ತಿದ್ದುಪಡಿ ಕಾಯ್ದೆ 2017ರ ನಿಯಮ 22(ಬಿ), ಉಪ ನಿಯಮ (2)ರ ಅನ್ವಯ ಕೃಪಾಂಕ ನೀಡಲಾಗಿದೆ ಎಂದು ತಿಳಿಸಿದ್ದಾರೆ.
ಪ್ರಸಕ್ತ ಸಾಲಿನ ದ್ವಿತೀಯ ಪಿಯು ಪರೀಕ್ಷೆಯಲ್ಲಿ ಆಂಗ್ಲ ಮತ್ತು ಭೌತಶಾಸ್ತ್ರ ಪ್ರಶ್ನೆ ಪತ್ರಿಕೆಯಲ್ಲಿ ಲೋಪದೋಷಗಳಿದ್ದ ಕಾರಣ ಈ ಪ್ರಶ್ನೆಗಳಿಗೆ ಕೃಪಾಂಕ ನೀಡಲು ಪದವಿಪೂರ್ವ ಶಿಕ್ಷಣ ಇಲಾಖೆ ನಿರ್ಧರಿಸಿದ್ದು, ಈ ನಿಟ್ಟಿನಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿಗಳಿಗೆ ಆಂಗ್ಲ ಭಾಷೆಯಲ್ಲಿ 3 ಮತ್ತು ಭೌತಶಾಸ್ತ್ರ ವಿಷಯದಲ್ಲಿ 6 ಒಟ್ಟಾರೆ 9 ಕೃಪಾಂಕ ದೊರೆಯಲಿದೆ.