ಕೆ.ಎನ್.ಪಿ.ವಾರ್ತೆ,ನವದೆಹಲಿ,ನ.14;

ರಫೇಲ್ ಯುದ್ಧವಿಮಾನ ಖರೀದಿ ಒಪ್ಪಂದಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಮಹತ್ವದ ತೀರ್ಪು ನೀಡಿದ್ದು ಮರುಪರಿಶೀಲನಾ ಅರ್ಜಿಯನ್ನು ವಜಾಗೊಳಿಸಿದೆ.

ರಫೇಲ್ ಯುದ್ಧವಿಮಾನ ಖರೀದಿ ಒಪ್ಪಂದಕ್ಕೆ ಸಂಬಂಧಿಸಿದಂತೆ ಕೇಂದ್ರಕ್ಕೆ ನೀಡಿರುವ ಕ್ಲೀನ್ ಚಿಟ್ ಪ್ರಶ್ನಿಸಿ ಸಲ್ಲಿಕೆಯಾಗಿರುವ ಮರುಪರಿಶೀಲನಾ ಅರ್ಜಿಯ ವಿಚಾರಣೆಯನ್ನು ಮೇ 10ರಂದು ಪೂರ್ಣಗೊಳಿಸಿದ್ದ ನ್ಯಾಯಾಲಯ ತೀರ್ಪನ್ನು ಇಂದಿಗೆ ಕಾಯ್ದಿರಿಸಿತ್ತು.

ಕಾಂಗ್ರೆಸ್ ಸೇರಿದಂತೆ ವಿಪಕ್ಷಗಳು ಸಲ್ಲಿಸಿದ್ದ ಮರು ಪರಿಶೀಲನಾ ಅರ್ಜಿಯನ್ನು ಸುಪ್ರೀಂಕೋರ್ಟ್ ಇಂದು ತಿರಸ್ಕರಿಸಿದ್ದು, ಈ ಮೂಲಕ ಎರಡು ಬಾರಿ ಕ್ಲೀನ್ ಚಿಟ್ ನೀಡಿದೆ.

36 ರಫೇಲ್ ಯುದ್ಧ ವಿಮಾನಗಳ ಖರೀದಿ ಒಪ್ಪಂದ ಪ್ರಕರಣದಲ್ಲಿ ಕೇಂದ್ರ ಸರ್ಕಾರಕ್ಕೆ ಸುಪ್ರೀಂಕೋರ್ಟ್ ಡಿಸೆಂಬರ್‌ನಲ್ಲಿ ಕ್ಲೀನ್ ಚಿಟ್ ನೀಡಿತ್ತು.  ಇದನ್ನು ಪ್ರಶ್ನಿಸಿ ಅರ್ಜಿದಾರರು ತೀರ್ಪು ಮರುಪರಿಶೀಲನಾ ಅರ್ಜಿ ಸಲ್ಲಿಸಿದ್ದರು.

ಈ ಕುರಿತಂತೆ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ ಅವರ ನೇತೃತ್ವದ ನ್ಯಾ. ಸಂಜಯ್ ಕಿಶನ್ ಕೌಲ್ ಮತ್ತು ಕೆಎಂ ಜೋಸೆಫ್ ಅವರನ್ನು ಒಳಗೊಂಡ ಮೂವರು ಸದಸ್ಯರ ನ್ಯಾಯಪೀಠ ತೀರ್ಪು ಪ್ರಕಟಿಸಿದೆ.

ಯುದ್ಧ ವಿಮಾನಗಳ ತಯಾರಿಕೆಗೆ ಫ್ರಾನ್ಸ್‌ನ ಡಸಾಲ್ಟ್ ಏವಿಯೇಷನ್ ಸಂಸ್ಥೆ ಜತೆ 59 ಸಾವಿರ ಕೋಟಿ ರೂ ಒಪ್ಪಂದ ಮಾಡಿಕೊಳ್ಳಲಾಗಿತ್ತು.

ಇದರ ಕುರಿತು ತನಿಖೆ ನಡೆಯಬೇಕು ಎಂದು ಆಗ್ರಹಿಸಿ ಸಲ್ಲಿಸಲಾಗಿದ್ದ ಎಲ್ಲ ಅರ್ಜಿಗಳನ್ನೂ 2018ರ ಡಿಸೆಂಬರ್‌ನಲ್ಲಿ ಸುಪ್ರೀಂಕೋರ್ಟ್ ವಜಾಗೊಳಿಸಿತ್ತು.

ಈಗಾಗಲೇ ಈ ಒಪ್ಪಂದಕ್ಕೆ ಸಂಬಂಧಿಸಿದ ಒಂದು ರಫೇಲ್ ಯುದ್ಧ ವಿಮಾನ ಭಾರತೀಯ ರಕ್ಷಣಾ ಪಡೆಯನ್ನು ಸೇರಿಕೊಂಡಿದೆ. ಉಳಿದ ವಿಮಾನಗಳು ಶೀಘ್ರದಲ್ಲಿಯೇ ಸೇರ್ಪಡೆಯಾಗಲಿವೆ ಎಂದು ಸರ್ಕಾರ ಹೇಳಿದೆ.

ರಾಹುಲ್‌ ಗಾಂಧಿಗೆ ತರಾಟೆ : 

ರಫೇಲ್ ಯುದ್ಧವಿಮಾನ ಖರೀದಿ ಒಪ್ಪಂದಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಮಹತ್ವದ ತೀರ್ಪು ನೀಡಿದ್ದು ಮರುಪರಿಶೀಲನಾ ಅರ್ಜಿಯನ್ನು ವಜಾಗೊಳಿಸಿದೆ. ಅಲ್ಲದೆ, ರಾಹುಲ್‌ ಗಾಂಧಿಯನ್ನು ಸುಪ್ರೀಂಕೋರ್ಟ್ ತರಾಟೆಗೆ ತೆಗೆದುಕೊಂಡಿದೆ.

ಇನ್ನು, ರಫೇಲ್‌ ಡೀಲ್‌ ”ಚೌಕೀದಾರ್‌ ಚೋರ್‌ ಹೈ” ಘೋಷಣೆ ಮಾಡಿದ್ದ ರಾಹುಲ್‌ ಗಾಂಧಿ ವಿರುದ್ಧ ಬಿಜೆಪಿ ಸಂಸದೆ ಮೀನಾಕ್ಷಿ ಲೇಖಿ ನ್ಯಾಯಾಂಗ ನಿಂದನೆ ಅರ್ಜಿ ದಾಖಲಿಸಿದ್ದರು. ಆದರೆ, ರಾಹುಲ್‌ ಗಾಂಧಿ ಸರ್ವೋಚ್ಛ ನ್ಯಾಯಾಲಯದಲ್ಲಿ ಕ್ಷಮೆ ಕೋರಿದ್ದ ಕಾರಣ ಈ ಪ್ರಕರಣವನ್ನು ಇತ್ಯರ್ಥಗೊಳಿಸಿದೆ. ಕಾಂಗ್ರೆಸ್‌ ಮಾಜಿ ಅಧ್ಯಕ್ಷ ರಾಹುಲ್‌ ಗಾಂಧಿ ಕ್ಷಮೆಯನ್ನು ಒಪ್ಪಿಕೊಂಡ ಸುಪ್ರೀಂಕೋರ್ಟ್ ನ್ಯಾಯಾಂಗ ನಿಂದನೆ ಕೇಸ್‌ ಇತ್ಯರ್ಥಪಡಿಸಿದೆ.

ಅಲ್ಲದೆ, ಭವಿಷ್ಯದಲ್ಲಿ ಎಚ್ಚರಿಕೆಯಿಂದ ಇರಬೇಕು ಎಂದು ರಾಹುಲ್‌ ಗಾಂಧಿಗೆ ಕೋರ್ಟ್ ಎಚ್ಚರಿಕೆ ನೀಡಿದೆ.

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ…

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.