ಕೆ.ಎನ್.ಪಿ.ವಾರ್ತೆ,ದೊಡ್ಡಬಳ್ಳಾಪುರ,ಮೇ.06;

ರೈಲಿಗೆ ತಲೆಕೊಟ್ಟು ಪ್ರೇಮಿಗಳಿಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡ ಬಳ್ಳಾಪುರದ ವೀರಾಪುರದಲ್ಲಿ ನಡೆದಿದೆ.

ದೊಡ್ಡಬಳ್ಳಾಪುರ ನಗರದ ಕಚೇರಿಪಾಳ್ಯ ನಿವಾಸಿಗಳಾದ ಲಕ್ಷ್ಮೀಪತಿ ಮತ್ತು ಶಾಂತಿನಗರ ಮೂಲದ ಯುವತಿ ವೀರಾಪುರದಲ್ಲಿ ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಲಕ್ಷ್ಮೀಪತಿ ಮತ್ತು ಯುವತಿ ಕೆಲವು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದರು. ಇವರ ಮದುವೆಗೆ ಮನೆಯವರ ವಿರೋಧ ಇರಬಹುದು ಎಂದು ಆತಂಕಗೊಂಡು ಆತ್ಮಹತ್ಯೆಗೆ ಶರಣಾಗಿರಬಹುದು ಎಂದು ಶಂಕಿಸಲಾಗಿದೆ. ದೊಡ್ಡಬಳ್ಳಾಫುರ ರೈಲ್ವೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ… 

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.