ಕೆ.ಎನ್.ಪಿ.ವಾರ್ತೆ,ಬಳ್ಳಾರಿ,ಮೇ.31;

ರಜೆ ಮುಗಿಯಿತು ಮಕ್ಕಳೇ ಶಾಲೆಗೆ ಬನ್ನಿ, ಪೋಷಕರೆ ನಿಮ್ಮ ಮಕ್ಕಳನ್ನು ಶಾಲೆಗೆ ಕಳುಹಿಸಿ, ಸರ್ಕಾರಿ ಶಾಲೆಗೆ ನಿಮ್ಮ ಮಕ್ಕಳನ್ನು ಸೇರಿಸಿ. ಇದು ದಾಖಲಾತಿ ಆಂದೋಲನ. 

ಉಚ್ಚoಗಿದುರ್ಗದ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ವತಿಯಿಂದ ದಾಖಲಾತಿ ಆಂದೋಲನದ ಭಾಗವಾಗಿ ಜಾಗೃತಿ ಅಭಿಯಾನವನ್ನು ನಡೆಸಲಾಯಿತು. 2018-19ರ ಶೈಕ್ಷಣಿಕ ವರ್ಷ ಪ್ರಾರಂಭವಾಗುತ್ತಿರುವ ಈ ಹೊತ್ತಿನಲ್ಲಿ ಎಲ್ಲ ಶಾಲೆಗಳಲ್ಲೂ ಮಕ್ಕಳ ದಾಖಲಾತಿಯ ಕಾರ್ಯ ಬಿರುಸಿನಿಂದ ನಡೆಯುತ್ತಿದೆ.

ಖಾಸಗಿ ಮತ್ತು ಸರಕಾರಿ ಶಾಲೆಗಳು ಪೈಪೋಟಿಗಿಳಿದಿದ್ದು, ಮಕ್ಕಳು ಮತ್ತು ಪಾಲಕರನ್ನು ಆಕರ್ಷಿಸಲು ವಿನೂತನ ಪ್ರಯತ್ನಗಳನ್ನು ಮಾಡುತ್ತಿವೆ. ಈ ಮಧ್ಯೆ ಹರಪನಹಳ್ಳಿ ತಾಲೂಕಿನ ಉಚ್ಛಂಗಿದುರ್ಗದ ಸರಕಾರಿ ಮಾದರಿಯ ಹಿರಿಯ ಪ್ರಾಥಮಿಕ ಶಾಲೆ ಸಿಬ್ಬಂದಿ ದಾಖಲಾತಿ ಆಂದೋಲನ ಕಾರ್ಯಕ್ರಮವನ್ನು ಹಮ್ಮಿಕೊಂಡು ಇಡೀ ಗ್ರಾಮದಾದ್ಯಂತ ರಜೆ ಮುಗಿಯಿತು ಮಕ್ಕಳೇ ಶಾಲೆಗೆ ಬನ್ನಿ ಎಂಬ ಹಲವಾರು ಘೋಷಣೆಗಳನ್ನು ಕೂಗುತ್ತಾ ಜಾಗೃತಿ ಮೂಡಿಸಿದರು.

ಮೇ 28 ಕ್ಕೆ ರಾಜ್ಯದಾದ್ಯಂತ ಶಾಲೆಗಳು ಪ್ರಾರಂಭವಾಗಿದ್ದು ಪೋಷಕರು ಹಾಗೂ ಮಕ್ಕಳಲ್ಲಿ ಜಾಗೃತಿ ಮೂಡಿಸುವುದು ಈ ಅಭಿಯಾನದ ಉದ್ದೇಶವಾಗಿದೆ. ಈ ನಿಟ್ಟಿನಲ್ಲಿ ಇಂದು ಬೆಳಿಗ್ಗೆ ಸರ್ಕಾರಿ ಶಾಲೆಯ ಆವರಣದಲ್ಲಿ ಸೇರಿದ ಮಕ್ಕಳು ವಿವಿಧ ವಾದ್ಯಗಳೊಂದಿಗೆ ಶಾಲೆಯಿಂದ ಗ್ರಾಮದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ, ನಿಮ್ಮ ಮಕ್ಕಳನ್ನು ಸರ್ಕಾರದ ಶಾಲೆಗೆ ಸೇರಿಸಿ. ಯಾರು ಶಾಲೆ ಬಿಟ್ಟು ಹೊರಗೆ ಉಳಿಯಬಾರದು, 6 ವರ್ಷ ತುಂಬಿದ ಪ್ರತಿಯೊಂದು ಮಗುವನ್ನು ಶಾಲೆಗೆ ಸೇರಿಸಿ. ಎಲ್ಲರೂ ಓದಿ ದೇಶದ ಪ್ರಗತಿಗೆ ಶ್ರಮಿಸಬೇಕು ಎನ್ನುವ ಘೋಷಣೆಗಳನ್ನು ಕೂಗಿದರು.

ಈ ಸಂದರ್ಭದಲ್ಲಿ ಮುಖ್ಯ ಶಿಕ್ಷಕ ಸಹದೇವ ಹಾಗೂ ಇತರ ಶಿಕ್ಷಕರು, ಸಿಆರ್ ಪಿ ಚಂದ್ರಪ್ಪ, ಎಸ್.ಡಿ.ಎಮ್.ಸಿ. ಅಧ್ಯಕ್ಷರಾದ ಕೆಂಚಪ್ಪ ಹಾಗೂ ಸರ್ವ ಸದಸ್ಯರು ಸೇರಿದಂತೆ ಶಾಲಾ ಮಕ್ಕಳು ಭಾಗವಹಿಸಿದ್ದರು.

ನೀವು ಕೂಡ ಬರೆಯಬಹುದು :

ವಾಟ್ಸಪ್ ಮಾಡಿ

9513326661

ಆತ್ಮೀಯರೇ ಕೆ.ಎನ್.ಪಿ.ಯಲ್ಲಿ ನೀವು ಕೂಡ ಬರೆಯಬಹುದಾಗಿದೆ. ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆಯಿರಿ, ಕೆ.ಎನ್.ಪಿ.ಗೆ ಕಳುಹಿಸಿರಿ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.