ಕೆ.ಎನ್.ಪಿ.ವಾರ್ತೆ,ಬೆಂಗಳೂರು,ಮಾ.28;

ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ನೇತೃತ್ವದ ಸಮ್ಮಿಶ್ರ ಸರ್ಕಾರ ರಾಜ್ಯ ಸರ್ಕಾರಿ ನೌಕರರಿಗೆ ಯುಗಾದಿ ಹಬ್ಬದ ಕೊಡುಗೆಯಾಗಿ ತುಟ್ಟಿ ಭತ್ಯೆಯನ್ನು ಹೆಚ್ಚಳ ಮಾಡಿದೆ.

ರಾಜ್ಯ ಸರ್ಕಾರ ನೌಕರರ ತುಟ್ಟಿಭತ್ಯೆಯನ್ನು 2018 ಪರಿಷ್ಕೃತ ವೇತನ ಶ್ರೇಣಿಯಲ್ಲಿ ಶೇ.2.75ರಷ್ಟು ಏರಿಕೆ ಮಾಡಿ ಗುರುವಾರ ಆದೇಶ ಹೊರಡಿಸಿದೆ.

ಜನವರಿ 1, 2019ರಿಂದ ಪೂರ್ವಾನ್ವಯವಾಗುವಂತೆ ತುಟ್ಟಿಭತ್ಯೆ ಶೇ.3.75ರಿಂದ ಶೇ.6.50ಕ್ಕೆ ಏರಿಕೆ ಮಾಡಿ ಹಣಕಾಸು ಇಲಾಖೆ ಇಂದು ಅಧಿಕೃತ ಆದೇಶ ಹೊರಡಿಸಿದ್ದು, ಇದರಿಂದಾಗಿ 8.5 ಲಕ್ಷ ನೌಕರರ ಮಾಸಿಕ ವೇತನ ಹೆಚ್ಚಳವಾಗಲಿದೆ.

ಕೇಂದ್ರ ಸರ್ಕಾರ ತನ್ನ ನೌಕರರಿಗೆ ತುಟ್ಟಿಭತ್ಯೆ ಹೆಚ್ಚಳ ಮಾಡಿದ ಬೆನ್ನಲ್ಲೇ ರಾಜ್ಯ ಸರ್ಕಾರವೂ ತನ್ನ ನೌಕರರ ತುಟ್ಟಿಭತ್ಯೆಯನ್ನು ಹೆಚ್ಚಳ ಮಾಡಿದೆ.

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ… 

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.