ಕೆ.ಎನ್.ಪಿ.ವಾರ್ತೆ,ಬೆಂಗಳೂರು,ಜು.26;

ರಾಜಭವನಕ್ಕೆ ತೆರಳಿ ರಾಜ್ಯಪಾಲರನ್ನು ಭೇಟಿಯಾಗಿ, ಇಂದೇ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲು ಅನುಮತಿ ಕೋರುವುದಾಗಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರು ಹೇಳಿದ್ದಾರೆ.

ಬೆಂಗಳೂರಿನಲ್ಲಿ ತಮ್ಮ ನಿವಾಸದಲ್ಲಿ ಮಾತನಾಡಿದ ಯಡಿಯೂರಪ್ಪ, ಇಂದು 10 ಗಂಟೆಗೆ ರಾಜ್ಯಪಾಲರನ್ನು ಭೇಟಿ ಮಾಡಲು ಸಮಯ ಕೋರಿದ್ದೇನೆ. ಇಂದೇ ಪ್ರಮಾಣವಚನ ಸ್ವೀಕಾರಕ್ಕೆ ಅನುಮತಿ ಕೋರುತ್ತೇನೆ. ಸರ್ಕಾರ ರಚನೆಗೆ ಅವಕಾಶ ಕೋರಲಿದ್ದೇನೆ’ ಎಂದು ಯಡಿಯೂರಪ್ಪ ತಿಳಿಸಿದ್ದಾರೆ.

ನಾನು ಪ್ರತಿಪಕ್ಷ ನಾಯಕನಾಗಿರುವ ಕಾರಣ ಮತ್ತೆ ಶಾಸಕಾಂಗ ಪಕ್ಷದ ಸಭೆ ನಡೆಸುವ ಅಗತ್ಯತೆ ಇಲ್ಲ ಎಂದು ಹೇಳಿದ್ದಾರೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರ ಸೂಚನೆ ಮೇರೆಗೆ ಯಡಿಯೂರಪ್ಪ ಇಂದು ರಾಜ್ಯಪಾಲರನ್ನು ಭೇಟಿ ಮಾಡಿ, ಇಂದೇ ಪ್ರಮಾಣವಚನ ಸ್ವೀಕರಿಸಲು ಅವಕಾಶ ಕೋರಲಿದ್ದಾರೆ ಎನ್ನಲಾಗಿದ್ದು, ರಾಜ್ಯಪಾಲರನ್ನು ಭೇಟಿ ಮಾಡಿ ಸರ್ಕಾರ ರಚನೆಯ ಹಕ್ಕು ಮಂಡಿಸಲು ಮನವಿ ಸಲ್ಲಿಸಲಿದ್ದಾರೆ.

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ… 

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.