ಕೆ.ಎನ್.ಪಿ.ವಾರ್ತೆ,ನವದೆಹಲಿ,ಮೇ.13;

ಮುಸ್ಲಿಮರ ಪವಿತ್ರ ಮಾಸವಾದ ರಂಜಾನ್ ಹಿನ್ನೆಲೆಯಲ್ಲಿ ಲೋಕಸಭೆ ಚುನಾವಣೆಯ ಮತದಾನ ಸಮಯವನ್ನು ಬದಲಿಸಬೇಕು ಎಂದು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ಸೋಮವಾರ ವಜಾಗೊಳಿಸಿದೆ.

ಕೇಂದ್ರ ಚುನಾವಣಾ ಆಯೋಗ ಲೋಕಸಭಾ ಚುನಾವಣೆಯ ಮತದಾನ ಬೆಳಗ್ಗೆ 7ಗಂಟೆಯಿಂದ ಸಂಜೆ 6ಗಂಟೆವರೆಗೆ ನಡೆಸುವಂತೆ ಪ್ರಕಟಣೆ ಹೊರಡಿಸಿತ್ತು. ಆದರೆ ರಂಜಾನ್ ಹಿನ್ನೆಲೆಯಲ್ಲಿ ಲೋಕಸಭಾ ಚುನಾವಣೆ ಅಂತಿಮ ಹಂತದ (ಮೇ 19) ಮತದಾನದ ಸಮಯವನ್ನು ಬೆಳಗ್ಗೆ 5.30ರಿಂದ ಅಥವಾ 6ಗಂಟೆಯಿಂದ ಆರಂಭಿಸಬೇಕೆಂದು ಕೋರಿ ವಕೀಲ ಮೊಹಮ್ಮದ್ ನಿಜಾಮುದ್ದೀನ್ ಪಾಶಾ ಅರ್ಜಿ ಸಲ್ಲಿಸಿದ್ದರು.

ಇದಕ್ಕೂ ಮುನ್ನ ಸುಪ್ರೀಂ ಪೀಠ, ಲೋಕಸಭಾ ಚುನಾವಣೆಯ ಬಾಕಿ ಇರುವ ಕ್ಷೇತ್ರಗಳಲ್ಲಿ ಮತದಾನದ ಸಮಯವನ್ನು ಬೆಳಗ್ಗೆ 5ಗಂಟೆಗೆ ಆರಂಭಿಸುವ ಕುರಿತು ನಿರ್ಧಾರ ತೆಗೆದುಕೊಳ್ಳುವಂತೆ ಕೇಂದ್ರ ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡಿತ್ತು. ಆದರೆ ಚುನಾವಣಾ ಆಯೋಗ ಸಮಯ ಬದಲಾವಣೆ ಅಸಾಧ್ಯ ಎಂದು ಅಫಿಡವಿತ್ ಸಲ್ಲಿಸಿತ್ತು.

ಈ ನಿಟ್ಟಿನಲ್ಲಿ ಸುಪ್ರೀಂಕೋರ್ಟ್ ನ್ಯಾಯಮೂರ್ತಿಗಳಾದ ಇಂದಿರಾ ಬ್ಯಾನರ್ಜಿ ಹಾಗೂ ಸಂಜೀವ್ ಖನ್ನಾ ನೇತೃತ್ವದ ರಜಾಕಾಲದ ಪೀಠ ಸಮಯ ಬದಲಾವಣೆಯ ಅರ್ಜಿಯನ್ನು ವಜಾಗೊಳಿಸಿದೆ.

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ… 

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.