ಕೆ.ಎನ್.ಪಿ.ವಾರ್ತೆ,ಮುಂಬೈ,ಸೆ.01;

ಮಹಾರಾಷ್ಟ್ರದ ಶಿರ್ಪುರದ ವಾಘಾಡಿ ಗ್ರಾಮದಲ್ಲಿ ಶನಿವಾರ ರಾಸಾಯನಿಕ ಕಾರ್ಖಾನೆಯಲ್ಲಿ ಬೃಹತ್ ಸ್ಫೋಟ ಸಂಭವಿಸಿದ್ದು, ಕನಿಷ್ಠ 20 ಜನರು ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ 50ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದು, ಗಾಯಾಳುಗಳನ್ನು ಉಪ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಂಭೀರ ಸ್ಥಿತಿಯಲ್ಲಿರುವವರನ್ನು ಖಾಸಗಿ ಆಸ್ಪತ್ರೆಗಳಿಗೆ ಸ್ಥಳಾಂತರಿಸಲಾಗಿದೆ. 

ಕಾರ್ಖಾನೆಯೊಳಗೆ ಇನ್ನೂ ಎಪ್ಪತ್ತಕ್ಕೂ ಹೆಚ್ಚು ಜನರು ಸಿಲುಕಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದು, ಒಟ್ಟಾರೆ ಸಾವಿನ ಸಂಖ್ಯೆ ಇನ್ನೂ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ಆತಂಕ ವ್ಯಕ್ತಪಡಿಸಿದ್ದಾರೆ.

ಇನ್ನು ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ಭರದಿಂದ ಸಾಗಿದ್ದು, ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್‌ಡಿಆರ್‌ಎಫ್) ತಂಡವನ್ನು ನಿಯೋಜಿಸಲಾಗಿದೆ.

ಪ್ರಾಥಮಿಕ ಮಾಹಿತಿಯ ಪ್ರಕಾರ, ಶಿರ್ಪುರದ ಮಹಾರಾಷ್ಟ್ರ ಕೈಗಾರಿಕಾ ಅಭಿವೃದ್ಧಿ ನಿಗಮದ ರಾಸಾಯನಿಕ ಕಂಪನಿ ಕಾಂಪೌಂಡ್ ಒಳಗೆ ಸ್ಫೋಟ ಸಂಭವಿಸಿದೆ. ಸ್ಫೋಟ ಎಷ್ಟು ತೀವ್ರವಾಗಿತ್ತೆಂದರೆ ಸುತ್ತಮುತ್ತಲಿನ ಹಳ್ಳಿಗಳಲ್ಲೂ ಕೂಡ ಕಂಪನ ಉಂಟಾಗಿದೆ. ಕಪ್ಪು ಹೊಗೆಯ ಧೂಳು ಇಡೀ ಪ್ರದೇಶವನ್ನು ಆವರಿಸಿದ್ದು, ಜನರನ್ನು ಸಾಗಿಸಲು ರಕ್ಷಣಾ ಸಿಬ್ಬಂದಿ ಹರಸಾಹಸ ಪಡುತ್ತಿದ್ದಾರೆ.

ಇನ್ನು ಎಂಐಡಿಸಿಯ ಆವರಣವು ನಗರದಿಂದ ದೂರವಿರುವುದರಿಂದ, ಹಲವಾರು ಕಾರ್ಮಿಕರು ತಮ್ಮ ಕುಟುಂಬಗಳೊಂದಿಗೆ ಕಂಪನಿಯ ಆವರಣದಲ್ಲಿ ವಾಸಿಸುತ್ತಾರೆ. ಪ್ರತ್ಯಕ್ಷದರ್ಶಿಗಳು ನೀಡಿರುವ ಮಾಹಿತಿ ಅನ್ವಯ ಈ ಸ್ಫೋಟದ ಸಮಯದಲ್ಲಿ ಸುಮಾರು 100 ಕಾರ್ಮಿಕರು ಕಾರ್ಖಾನೆಯೊಳಗೆ ಇದ್ದರು ಎನ್ನಲಾಗಿದೆ. ಗಾಯಗೊಂಡವರಲ್ಲಿ ಕಾರ್ಖಾನೆ ಕಾಂಪೌಂಡ್‌ನಲ್ಲಿ ವಾಸಿಸುವ ಹಲವಾರು ಅಪ್ರಾಪ್ತ ಮಕ್ಕಳು ಸೇರಿದ್ದಾರೆ ಎನ್ನಲಾಗಿದೆ.

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ… 

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.