ಕೆ.ಎನ್.ಪಿ.ಸಿನಿಸಮಾಚಾರ;

ದಕ್ಷಿಣ ಭಾರತೀಯ ಚಿತ್ರರಂಗದಲ್ಲಿ ಭಾರಿ ಸದ್ದು ಮಾಡುತ್ತಿರುವ ‘ಡಿಯರ್ ಕಾಮ್ರೇಡ್’ ಸಿನಿಮಾ ರಿಲೀಸ್ ಡೇಟ್ ಬಹಿರಂಗವಾಗಿದ್ದು, ಕನ್ನಡದ ಕಿರಿಕ್ ಬೆಡಗಿ ರಶ್ಮಿಕಾ ಮಂದಣ್ಣ ಮತ್ತು ಅರ್ಜುನ್ ರೆಡ್ಡಿ ಖ್ಯಾತಿಯ ವಿಜಯ್ ದೇವರಕೊಂಡ ಅಭಿನಯದ ‘ಡಿಯರ್ ಕಾಮ್ರೇಡ್’ ಜುಲೈ 26ಕ್ಕೆ ತೆರೆಗೆ ಬರಲು ಸಜ್ಜಾಗಿದೆ.

ಈ ಬಗ್ಗೆ ಸ್ವತಹಃ ನಟ ವಿಜಯ್ ದೇವರಕೊಂಡ ಸಾಮಾಜಿಕ ಜಾಲತಾಣದಲ್ಲಿ ಹೇಳಿಕೊಂಡಿದ್ದಾರೆ. ರಶ್ಮಿಕಾ ಮತ್ತು ವಿಜಯ್ ನಡುವಿನ ಲಿಪ್ ಲಾಕ್ ದೃಶ್ಯದ ಟೀಸರ್ ಸೌತ್ ಸಿನಿ ಇಂಡಸ್ಟ್ರಿಯಲ್ಲಿ ಸಂಚಲನ ಮೂಡಿಸಿತ್ತು.

ಒಂದು ಪುಟ್ಟ ಟೀಸರ್ ಮತ್ತು ಒಂದು ಹಾಡನ್ನು ಮಾತ್ರ ರಿಲೀಸ್ ಮಾಡಿ ಅಭಿಮಾನಿಗಳ ಕುತೂಹಲ ಹೆಚ್ಚಿಸಿದ್ದ ‘ಡಿಯರ್ ಕಾಮ್ರೇಡ್’ ಯಾವಾಗ ರಿಲೀಸ್ ಆಗುತ್ತೆ ಅಂತ ಸಿನಿಪ್ರಿಯರು ಜಾತಕ ಪಕ್ಷಿಯಂತೆ ಕಾಯುತ್ತಿದ್ದರು. ಆದ್ರೀಗ ರಿಲೀಸ್ ಡೇಟ್ ಬಹಿರಂಗವಾಗಿದ್ದು, ರಶ್ಮಿಕಾ-ವಿಜಯ್ ಅಭಿಮಾನಿಗಳು ಫುಲ್ ಖುಷ್ ಆಗಿದ್ದಾರೆ.

ವಿಶೇಷ ಅಂದ್ರೆ ‘ಡಿಯರ್ ಕಾಮ್ರೇಡ್’ ಕನ್ನಡದಲ್ಲೂ ತೆರೆಗೆ ಬರುತ್ತಿದೆ. ರಶ್ಮಿಕಾ ಜೊತೆ ಕನ್ನಡಕ್ಕೆ ಮೊದಲ ಬಾರಿಗೆ ಎಂಟ್ರಿ ಕೊಡುತ್ತಿರುವ ವಿಜಯ್ ದೇವರಕೊಂಡ ನೋಡಲು ಕನ್ನಡ ಅಭಿಮಾನಿಗಳು ಕಾಯುತ್ತಿದ್ದಾರೆ.

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ… 

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.